ಬೀದರ.25.ಜನವರಿ.26- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವ ಜನರನ್ನು ಸ್ವಾವಲಂಭಿಯಾಗಲು, ಉತ್ತೇಜಿಸುವ ದೃಷ್ಟಿಯಿಂದ ದಿನಾಂಕ: 01-02-2026 ರಿಂದ 17-03-2026ರ (45 ದಿನಗಳ) ವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಎಸ್.ಎಸ್.ಎಲ್.ಸಿ. ಪಾಸಾಗಿರುವ 18 ವರ್ಷ ಮೇಲ್ಪಟ್ಟ ಹಾಗೂ 35 ವರ್ಷಗಳ ವಯೋಮಿತಿಯ ಅಭ್ಯರ್ಥಿಗಳಿಗೆ ಜಿಮ್/ಫಿಟ್ನೆಸ್ ತರಬೇತಿ ಶಿಬಿರಕ್ಕೆ ಪರಿಶಿಷ್ಟ ಜಾತಿಯ ಯುವಕರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ತರಬೇತಿ ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಭಾಗವಹಿಸುವ ಆಸಕ್ತರು ಆರ್.ಡಿ. ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ, ಭಾವ ಚಿತ್ರ ಹಾಗೂ ಆಧಾರ ಕಾರ್ಡ್ ಹಾಗೂ ಜನ್ಮ ದಿನಾಂಕದ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಬೀದರ ಕಛೇರಿಯಲ್ಲಿ ದಿನಾಂಕ: 27-01-2026 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಸಹಾಯಕ ನಿರ್ದೇಶಕರವರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಬೀದರಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.






Any questions related to ವಿವಿಧ ತರಬೇತಿ ಶಿಬಿರ’ಗ: ಅರ್ಜಿ ಆಹ್ವಾನ?