Home » ಲೈವ್ ನ್ಯೂಸ್ » ಗ್ರಾಮ ಒನ್ ಕೇಂದ್ರ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಗ್ರಾಮ ಒನ್ ಕೇಂದ್ರ ಸ್ಥಾಪನೆಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ್: ಸರ್ಕಾರದ ಎಲ್ಲ ಸೇವೆಗಳನ್ನು ಒಂದೇ ಸೂರಿನಡಿ
ತರಲು ಬೀದರ ತಾಲ್ಲೂಕಿನ 09, ಭಾಲ್ಕಿ ತಾಲ್ಲೂಕಿನ 06, ಔರಾದ (ಬಿ) ತಾಲ್ಲೂಕಿನ 08, ಬಸವಕಲ್ಯಾಣ ತಾಲ್ಲೂಕಿನ 06, ಹುಮನಾಬಾದ ತಾಲ್ಲೂಕಿನ 05. ಕಮಲನಗರ ತಾಲ್ಲೂಕಿನ 07, ಚಿಟಗುಪ್ಪಾ ತಾಲ್ಲೂಕಿನ 3 ಸೇರಿ ಒಟ್ಟು 44 ಪಂಚಾಯತಿಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಒನ್? ಇದು ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ಸೇವಾಸಿಂಧು ಯೋಜನೆ ಅಡಿಯಲ್ಲಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ಯೋಜನೆಯಡಿಯಲ್ಲಿ

ಗ್ರಾಮ ಒನ್ 750ಕ್ಕೂ ಹೆಚ್ಚು ನಾಗರಿಕರ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅದೇ ರೀತಿ ಸಕಾಲ, ಮಾಹಿತಿ ಹಕ್ಕು ಅಧಿನಿಯಮ, ಬ್ಯಾಂಕಿಂಗ್ ಸೇವೆಗಳು

ಹಾಗೂ ಸಾರ್ವಜನಿಕರ ಕುಂದುಕೊರತೆ ನಿವಾರೆಗೆ ಕೋರಿ ಅರ್ಜಿಗಳನ್ನು ಸ್ವೀಕರಿಸಲಾಗುವುದು. ವಾರದ ಎಲ್ಲಾ ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೂ ಕಾರ್ಯನಿರ್ವಹಿಸಲಿವೆ.

ಈ ಯೋಜನೆಯನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದು, ಸದ್ಯ ಸ್ಥಾಪನೆಗಾಗಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಕಲಬುರಗಿ ವಿಭಾಗದ ಪಾಲುದಾರಿಕೆ ಸಂಸ್ಥೆ ವತಿಯಿಂದ 2: 01-02-2026 00 15-02-2026 0 ಅರ್ಜಿ ಆಹ್ವಾನಿಸಲಾಗಿದೆ.

ಕಾರಣ ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 15-02-2026 ರೊಳಗಾಗಿ ಜಾಲತಾಣದ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology