ಚಳ್ಳಕೆರೆಯ: 18.ಫೆಬ್ರವರಿ.26: ರಾಜ್ಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಮುಂಬರುವ ಶೈಕ್ಷಣಿಕ ಸಾಲಿಗೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ಡಿಟಿಡಿಎಂ-ಯಾಂತ್ರಿಕ ಇಂಜಿನಿಯರಿಂಗ್ (ಬಿ.ಇ/ ವಿವಿಧ ಎಂ.ಟೆಕ್-ಮೆಕಾನಿಕಲ್), ಡಿಎಂಸಿಹೆಚ್-ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ (ಬಿ.ಇ/ಎಂ.ಟೆಕ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ರೆಸುಂ ಮತ್ತು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಕಾಲೇಜಿಗೆ ಭೇಟಿ ನೀಡಬಹುದು ಅಥವಾ ಇ-ಮೇಲ್ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಜಿಟಿಟಿಸಿ ನಿಯಮಾನುಸಾರ ವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7625008641, 8147384716 ಗೆ ಸಂಪರ್ಕಿಸಬಹುದು ಎಂದು ಚಳ್ಳಕೆರೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.





Any questions related to ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ?