ಬೀದರ.19.ಫೆಬ್ರವರಿ.26:- ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲ ಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳ ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಙಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳ ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಹಾಗೂ ಅಕಾಡೆಮಿಯ ಕೇಂದ್ರ ಕಛೇರಿಯಿಂದ (ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ ಕೆ.ಎಚ್.ಬಿ. ಕಾಲೋನಿ, ಲಕಮನಹಳ್ಳಿ ಧಾರವಾಡ-580004 ದೂರವಾಣಿ ಸಂ:0836-2461666) ಪಡೆದು ದಿನಾಂಕ:20-02-2026 ರೊಳಗಾಗಿ ಅಕಾಡೆಮಿಯ ಕೇಂದ್ರ ಕಛೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8050392209, 7204396275, 9448981944 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.





Any questions related to ನಾಳೆ ಕೊನೆ ದಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿಗಳ ಆಹ್ವಾನ?