ರಾಯಚೂರು.26.ಫೆಬ್ರವರಿ.26: ಇಲ್ಲಿನ ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಕೌಶಲ್ಯಾಭಿವೃದ್ಧಿ (ಎಂಟರನ್ರ್ಶಿಪ್ ಪ್ರೋಗ್ರಾಮ್ (ಇಪಿ))
ತರಬೇತಿ ಹಾಗೂ ಮೊಬೈಲ್ ಕ್ಯಾಂಟೀನ್ ಖರೀದಿಸಲು ಸಹಾಯಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಂಟರನ್ರ್ಶಿಪ್ ಪ್ರೋಗ್ರಾಮ್ ಕಾರ್ಯಕ್ರಮಕ್ಕೆ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಉತ್ತೀರ್ಣವಾಗಿರಬೇಕು. ಒಂದು ತಿಂಗಳಗಳ ಕಾಲ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು 20ರಿಂದ 55 ವರ್ಷದೊಳಗಿನ 6 ಪರಿಶಿಷ್ಟ ಜಾತಿ ಹಾಗೂ 4 ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿದ್ದು, ಆಸಕ್ತರು ಮಾರ್ಚ್ 13ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಗಣೇಶ ಗುಡಿ ಹತ್ತಿರ, ನಿಜಲಿಂಗಪ್ಪ ಕಾಲೋನಿ, ರಾಯಚೂರು-584101, ದೂರವಾಣಿ ಸಂಖ್ಯೆ:08532-200677ಗೆ ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್<br>ಕ್ಯಾಂಟೀನ್ ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ?