ಹುಬ್ಬಳ್ಳಿ05. ಮಾರ್ಚ್.26: ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ಅತಿಥಿ ಉಪನ್ಯಾಸಕರು ಸತತ ಎರಡು ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ರಾಜ್ಯ ಸರ್ಕಾರ ಯಾವದೇ ಭೇದಭಾವ ಇಲ್ಲದ ಸೇವಾ ಭದ್ರತೆ ಕಲ್ಪಿಸಬೇಕು ಡಾ ಹನುಮಂತ ಗೌಡಾ ಕಲ್ಮನಿ.
ಇಂದು ಹುಬ್ಬಳ್ಳಿಯ ಪತ್ರಿಕಾ ಭವನದಲ್ಲಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ, NON UGC ಹಾಗೂ UGC ಎಂಬ ಬೇಧಭಾವ ಮಾಡದೇ ಸೇವಾಭದ್ರತೆಯನ್ನು ಮುಂಬರುವ ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಇಲ್ಲವಾದರೆ ಬಜೆಟ್ ನಂತರ ತುಮಕೂರಿನ ಶ್ರೀ ಸಿದ್ಧಗಂಗಾ ಮಠದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನ ವರೆಗೆ ಬೃಹತ್ ಪಾದಯಾತ್ರೆ ನಡೆಸಿ, ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅತಿಥಿ ಉಪನ್ಯಾಸಕರ ಪ್ರಮುಖರು ಉಪಸ್ಥಿತರಿದ್ದರು. ಜೈ ಭುವನೇಶ್ವರಿ,






Any questions related to NON UGC ಹಾಗೂ UGC ಎಂಬ ಬೇಧಭಾವ ಮಾಡದೇ ಸೇವಾಭದ್ರತೆ ನೀಡಿ.?