Home » ಲೈವ್ ನ್ಯೂಸ್ » ರಾಜ್ಯ ಸಚಿವ ಸಂಪುಟ ಸಭೆ – ವಿವಿಧ ವಿಷಯಗಳ ಚರ್ಚೆ ವಿವರ

ರಾಜ್ಯ ಸಚಿವ ಸಂಪುಟ ಸಭೆ – ವಿವಿಧ ವಿಷಯಗಳ ಚರ್ಚೆ ವಿವರ

Facebook
X
WhatsApp
Telegram

ಬೆಂಗಳೂರು.13.ಮಾರ್ಚ್.26: ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಒಟ್ಟು 28 ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ.

ರಾಜ್ಯ ಸಂಪುಟ ಸಭೆಯಲ್ಲಿ ಮಂಡ್ಯದ ಮೈಶುಗರ್ ಕಾರ್ಖಾನೆ ದುರಸ್ತಿ, 76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣ, ಹಾಗೂ ಕೆಎಚ್‌ಬಿ ಸೂರ್ಯಸಿಟಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಅನುಮೋದನೆ ಕೊಡಲಾಗಿದೆ.

ಕ್ರೀಡಾಂಗಣ ಯೋಜನೆ:
ಬೆಂಗಳೂರು ನಗರದ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಸುಮಾರು 75 ಎಕರೆ ಜಮೀನಿನಲ್ಲಿ 813 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲು ತೀರ್ಮಾನಿಸಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಣಿಜ್ಯ ಮಳಿಗೆಗಳು ಮತ್ತು ಇತರೆ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯೂ ರೂಪಿಸಲಾಗಿದೆ. ಅಧಿಕಾರಿಗಳಿಗೆ ಕಟ್ಟಡ ಕಾಮಗಾರಿಗಳ ಪರಿಷ್ಕೃತ ವೆಚ್ಚದ ವಿವರಗಳನ್ನು ಮುಂದಿನ ಸಭೆಗೆ ಸಲ್ಲಿಸಲು ಸೂಚನೆ ನೀಡಲಾಗಿದೆ.

ಶಾಲೆಗಳ ಉನ್ನತೀಕರಣ:
ಸಂಪುಟ ಸಭೆಯಲ್ಲಿ 76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. 41 ಉರ್ದು ಮಾಧ್ಯಮ ಶಾಲೆಗಳ ಉನ್ನತೀಕರಣಕ್ಕೆ 682 ಕೋಟಿ ರೂ. ವೆಚ್ಚವನ್ನು ಮೀಸಲಿಟ್ಟಿದೆ.

ಮಂಡ್ಯದಲ್ಲಿ ನಾಲೆಗಳ ಆಧುನೀಕರಣ:
ಮಂಡ್ಯ ವಿಧಾನಸಭಾ ಕ್ಷೇತ್ರದ ಕಾವೇರಿ ಶಾಖಾ ನಾಲೆ, ಕೆರೆಗೋಡು ಶಾಖಾ ನಾಲೆ, ಶಿಂಷಾ ಶಾಖಾ ನಾಲೆ ಸೇರಿದಂತೆ ನಾಲ್ಕು ಕಾವೇರಿ ವಿತರಣಾ ನಾಲೆಗಳ ಆಧುನೀಕರಣಕ್ಕೆ 100 ಕೋಟಿ ರೂ. ಅನುದಾನವನ್ನು ಸಚಿವ ಸಂಪುಟ ಅಸ್ತು ನೀಡಿದೆ.

ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಮೈಶುಗರ್ ಕಾರ್ಖಾನೆಯ ದುರಸ್ತಿ ಮತ್ತು ಆಧುನೀಕರಣಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ. ಕಾರ್ಖಾನೆಯಲ್ಲಿ ಪ್ರತಿ ದಿನ 5,000 ಟನ್ (5000 TCD) ಕಬ್ಬು ನುರಿಯುವ ಸಾಮರ್ಥ್ಯದ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸಲಾಗುವುದು ಸೇರಿ ಇಡೀ ಯೋಜನೆಯ ಕಾಮಗಾರಿಗಾಗಿ ಒಟ್ಟು 60 ಕೋಟಿ ರೂಪಾಯಿ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ.

ಆನೇಕಲ್‌ನ ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ (ಕೆಎಚ್‌ಬಿ ಸೂರ್ಯಸಿಟಿ) 80 ಸಾವಿರ ಆಸನಗಳ ಸಾಮರ್ಥ್ಯವಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸುಮಾರು 813 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕ್ರೀಡಾಂಗಣ ತಲೆ ಎತ್ತಲಿದೆ.

ಒಟ್ಟು 75 ಎಕರೆ ವಿಸ್ತಾರವಾದ ಜಮೀನಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಮತ್ತು ಕ್ರೀಡಾಂಗಣ ಸಂಕೀರ್ಣ ನಿರ್ಮಾಣವನ್ನು 1,980 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಆದರೆ, ಸದ್ಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಮಾತ್ರ ಸಂಪುಟ ಸಭೆ ಅನುಮೋದನೆ ನೀಡಿದೆ. ಕ್ರೀಡಾಂಗಣ ಸಂಕೀರ್ಣ ನಿರ್ಮಾಣ ಪ್ರಸ್ತಾವನೆಯನ್ನು ಸದ್ಯಕ್ಕೆ ತಡೆಹಿಡಿದಿದೆ.

ಮರ್ಯಾದೆ ಹತ್ಯೆ ಮತ್ತಿತರ ಅಪರಾಧ ಕೃತ್ಯಗಳ ನಿಯಂತ್ರಣಕ್ಕಾಗಿ ಹೊಸ ಕಾನೂನು ಜಾರಿ ಉದ್ದೇಶದ ಮಹತ್ವದ ವಿಧೇಯಕವನ್ನು ರಾಜ್ಯ ಸಚಿವ ಸಂಪುಟ ಸಭೆ ಅನುಮೋದಿಸಿದೆ. ‘ಕರ್ನಾಟಕ ವಿವಾಹ ಆಯ್ಕೆ ಸ್ವಾತಂತ್ರ್ಯ ಮತ್ತು ಗೌರವ, ಸಂಪ್ರದಾಯದ ಹೆಸರಿನಲ್ಲಿ ಅಪರಾಧ ತಡೆ ಮತ್ತು ಪ್ರತಿಬಂಧಕ (ಇವ ನಮ್ಮವ ಇವ ನಮ್ಮವ) ವಿಧೇಯಕ -2026’ ಅನ್ನು ಸಂಪುಟ ಅನುಮೋದಿಸಿದೆ.

ಅಂತರ್ಜಾತಿ ವಿವಾಹಗಳಿಗೆ ಘನತೆ ಮತ್ತು ಗೌರವ ತಂದುಕೊಡುವುದು, ಜಾತಿ ಆಧಾರದಲ್ಲಿ ತಾರತಮ್ಯ ಮತ್ತು ದೌರ್ಜನ್ಯಗಳನ್ನು ತಪ್ಪಿಸಲು ಈ ವಿಧೇಯಕಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ.

ಇದೇ ವೇಳೆ ವೃತ್ತಿ, ಕಸುಬು ಮತ್ತು ಉದ್ಯೋಗಗಳ ಮೇಲಿನ ತೆರಿಗೆ ತಿದ್ದುಪಡಿ ವಿಧೇಯಕ -2026, ಖಾಸಗಿ ವೈದ್ಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ -2026, ಕಂದಾಯ ಸೇವೆಗಳ ವೃಂದ ಮತ್ತು ನೇಮಕ ನಿಯಮ-2026ಕ್ಕೆ ಅನಮೋದನೆ ನೀಡಲಾಗಿದೆ.

ಉರ್ದು ಶಾಲೆಗಳ ಉನ್ನತೀಕರಣ

ರಾಜ್ಯದ 76 ಮೌಲಾನಾ ಆಜಾದ್‌ ಆಂಗ್ಲ ಮಾದರಿ ಶಾಲೆಗಳು ಹಾಗೂ 41 ಉರ್ದು ಮಾಧ್ಯಮ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ (ಕೆಪಿಎಸ್‌) ಉನ್ನತೀಕರಿಸಲು ಸಂಪುಟ ತೀರ್ಮಾನಿಸಿ, ಈ ಉದ್ದೇಶಕ್ಕೆ ಒಟ್ಟು 683.33 ಕೋಟಿ ರೂ. ಭರಿಸಲು ನಿರ್ಧರಿಸಿದೆ.

ಸಚಿವ ಸಂಪುಟ ಸಭೆಯ ಇತರ ಪ್ರಮುಖ ನಿರ್ಣಯಗಳು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಗೆ 10.83 ಕೋಟಿ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್‌ ನಿರ್ಮಾಣ.

ಖೇಲೋ ಇಂಡಿಯಾ ಯೋಜನೆಯಡಿ ಮಂಡ್ಯದ ಕೃಷಿ ವಿಜ್ಞಾನ ವಿವಿಯಲ್ಲಿ14 ಕೋಟಿ ವೆಚ್ಚದಲ್ಲಿ ಬಹುಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ.

ಮೂಲ್ಕಿ ತಾಲೂಕು ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗಳ 11.60 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ.
ಗದಗ, ಶಿರಹಟ್ಟಿ ಮತ್ತು ಮುಂಡರಗಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಿಗೆ 110.65 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ.

ಮಂಡ್ಯದ ಕಾವೇರಿ ಶಾಖಾ ನಾಲೆ, ಕೆರಗೋಡು, ಶಿಂಷಾ ಮತ್ತು ಮದ್ದೂರು ಶಾಖಾ ನಾಲೆಗಳ ವ್ಯಾಪ್ತಿಯ ವಿತರಣಾ ಕಾಲುವೆ ಮತ್ತು ಪಿಕಪ್‌ ನಾಲೆಗಳನ್ನು 100 ಕೋಟಿ ವೆಚ್ಚದಲ್ಲಿ ಆಧುನೀಕರಣ ಮಾಡಲು ಸಂಪುಟ ಒಪ್ಪಿಗೆ.

ಇತರೆ ನಿರ್ಣಯಗಳು: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕಾವೇರಿ ಶಾಖಾ ನಾಲೆ, ಕೆರಗೋಡು ಶಾಖಾ ನಾಲೆ, ಶಿಂಷಾ ಶಾಖಾ ನಾಲೆ ಮತ್ತು ಹೊಸ ಮದ್ದೂರು ಶಾಖಾ ನಾಲೆಗಳಡಿಯಲ್ಲಿನ ವಿತರಣಾ ನಾಲೆ ಹಾಗೂ ಪಿಕಲ್ ನಾಲೆಗಳ ಆಧುನೀಕರಣ ಕಾಮಗಾರಿಯನ್ನು 100 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಮೈಸೂರು ಸಕ್ಕರೆ ಕಾರ್ಖಾನೆಯ ಬಾಯ್ಲಿಂಗ್ ಹೌಸ್ ದುರಸ್ತಿ ಮತ್ತು 5 ಸಾವಿರ ಟಿಸಿಡಿ ಕಬ್ಬು ನುರಿಸಲು ಸ್ಪಂದಿಸುವ ಹೊಸ ಯಂತ್ರೋಪಕರಣಗಳನ್ನು ಅಳವಡಿಸುವ 60 ಕೋಟಿ ರೂ.ಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧಿಕೃತ ಷೇರು ಬಂಡವಾಳವನ್ನು 95 ಕೋಟಿ ರೂ.ಗಳಿಂದ 125 ಕೋಟಿ ರೂ.ಗಳಿಗೆ ಹೆಚ್ಚಿಸಲು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿಯನ್ನು 10.83 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.

ವಿಜಯಪುರ ನಗರದ ವಾರ್ಡ್ ಸಂಖ್ಯೆ 5ರಲ್ಲಿನ ಸಿಟಿಎಸ್ ಸಂಖ್ಯೆ 605ಎ, 1ಎ, 1ಎ1, ಎ2ರಲ್ಲಿ ಗುತ್ತಿಗೆ ಆಧಾರದ ಮೇಲೆ ನೀಡಿರುವ 6 ಎಕರೆ ಜಮೀನನ್ನು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯಕ್ಕೆ ಆಯುರ್ವೇದ ಮಹಾವಿದ್ಯಾಲಯ ಕಟ್ಟಡ, ಆಟದ ಮೈದಾನ ಮತ್ತು ಆಯುರ್ವೇದ ಗಿಡಗಳನ್ನು ಬೆಳೆಸುವುದಕ್ಕಾಗಿ ಖಾಯಂ ಆಗಿ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸ.ನಂ.68ರಲ್ಲಿ 100 ಎಕರೆ ‘ಗೋಮಾಳ’ ಜಮೀನನ್ನು ಬೆಂಗಳೂರಿನ ನೊಳಂಬ ಲಿಂಗಾಯಿತ ಸಂಘ(ರಿ)ಕೆಕ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ ಮಂಜೂರು ಮಾಡಲು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲೂಕು ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗಳ 11.60 ಕೋಟಿ ರೂ.ಗಳ ಪರಿಷ್ಕøತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

2025-26ನೆ ಸಾಲಿನ 15ನೆ ಹಣಕಾಸು ಆಯೋಗದ ಅನುದಾನದಡಿ 27 ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು 17.55 ಕೋಟಿ ರೂ.ಅಂದಾಜು ಮೊತ್ತದಲ್ಲಿ ನಿರ್ಮಿಸಲು, ಕರ್ನಾಟಕ ಜಾಹೀರಾತು ನೀತಿ-2026 ಹಾಗೂ ಖೇಲೋ ಇಂಡಿಯಾ ಯೋಜನೆಯಡಿ ಮಂಡ್ಯ ಜಿಲ್ಲೆಯ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬಹುಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಯನ್ನು 14 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ.

ಲೀಪ್ ಕಾರ್ಯಕ್ರಮದಡಿ ಗ್ರಾಮೀಣ ಕೇಂದ್ರೀತ ಹಸ್ತಕ್ಷೇಪ ಕೃಷಿ ಮತ್ತು ಸಂಬಂಧಿತ ಕ್ಷೇತ್ರದಲ್ಲಿ ಉತ್ಕøಷ್ಟತಾ ಕೇಂದ್ರವನ್ನು 16.05 ಕೋಟಿ ರೂ.ಗಳ ಮೊತ್ತದಲ್ಲಿ ಕಲಬುರಗಿಯಲ್ಲಿ ಸ್ಥಾಪಿಸಲು ಅನುಮೋದನೆ ನಈಡಿ ಫೆ.24ರಂದು ಹೊರಡಿಸಿರುವ ಸರಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ರಾಯಚೂರು ಜಿಲ್ಲೆ ಮಾನ್ನಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ಜಲಸಂಗ್ರಹ ಗಾರ (Impounding Reservoir) ಕಾಮಗಾರಿ ಯನ್ನು ರೂ.38.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಹಾಗೂ ಗದಗ, ಶಿರಹಟ್ಟಿ ಹಾಗೂ ಮುಂಡರಗಿ (ಮುಂಡರಗಿ ಪಟ್ಟಣ ಸೇರಿದಂತೆ) ತಾಲ್ಲೂಕುಗಳ ಗ್ರಾಮೀಣ ಪ್ರದೇಶದ ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಕಾರ್ಯಾ ಚರಣೆ ಹಾಗೂ ನಿರ್ವಹಣೆ ಕಾಮಗಾರಿಯನ್ನು ರೂ.110.65 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಮಡಿಕೇರಿ ಪ್ರಾದೇಶಿಕ ವಿಭಾಗ, ಕುಶಾಲನಗರ ವ್ಯಾಪ್ತಿಯಲ್ಲಿ ಅಂಚೆತಿಟ್ಟು ಗಾರೆಕಟ್ಟೆ ಗಡಿಯಿಂದ ಜೋಜೋ ಥಾಮಸ್ ಮನೆ, ಘಟ್ಟದಳ್ಳ ಬೀಟ್ ಮಲ್ದಾರೆ ಸೆಕ್ಷನ್ ವರೆಗೆ ಒಟ್ಟು 6.95ಕಿ.ಮೀ. ಉದ್ದದ ರೈಲ್ವೆ ಬ್ಯಾರಿಕೇಡ್‍ ಅನ್ನು ರೂ.12.40 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನು ಹಾಗೂ 41 ಉರ್ದು ಮಾಧ್ಯಮ ಶಾಲೆಗಳನ್ನು ರೂ.683.33 ಕೋಟಿಗಳ ಅಂದಾಜು ಮೊತ್ತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಹಾಗೂ ‘ಕರ್ನಾಟಕ ವೃತ್ತಿಗಳ, ಕಸುಬುಗಳ,ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ (ತಿದ್ದುಪಡಿ) ವಿಧೇಯಕ,2026″ಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ)ವಿಧೇಯಕ 2026 ಹಾಗೂ ಕೊಪ್ಪಳ ಜಿಲ್ಲೆಯ ಕುಕನ್ನೂರು ತಾಲ್ಲೂಕಿನ ಕುಕನೂರು ಪಟ್ಟಣದ ಶ್ರೀ ಗುದ್ದೇಶ್ವರ ದೇವಸ್ಥಾನದ ಸ.ನಂ. 78ರಲ್ಲಿ 73.07 ಎಕರೆ ಜಮೀನಿನ ಪೈಕಿ 10 ಎಕರೆ ಜಮೀನನ್ನು ಕುಕನೂರು ಪಟ್ಟಣದ 100 ಹಾಸಿಗೆ ಆಸ್ಪತ್ರೆಗೆ ಮತ್ತು 7 ಎಕರೆ ಜಮೀನನ್ನು ಕುಕನೂರು ತಾಲ್ಲೂಕು ಕ್ರೀಡಾಂಗಣಕ್ಕೆ ಗುತ್ತಿಗೆ ಆಧಾರದ ಮೇಲೆ ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಕರ್ನಾಟಕ ರಾಜ್ಯ ಕಂದಾಯ ಸೇವೆಗಳು (ವೃಂದ ಮತ್ತು ನೇಮಕಾತಿ) ನಿಯಮಗಳು, 2026 ಹಾಗೂ 2024ರ ಸೆ.11ರಂದು 25 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ 2500 ಕಾಫಿ ಕಿಯೋಸ್ಟ್ ಗಳನ್ನು ಸ್ಥಾಪಿಸಲು ನೀಡಿರುವ ಆಡಳಿತಾತ್ಮಕ ಆದೇಶವನ್ನು ಅನುಮೋದನೆಯ ಪರಿಷ್ಕರಿಸಿ ಅದೇ ವೆಚ್ಚದಲ್ಲಿ 1840 ಕಾಫಿ ಕಿಯೋಸ್ಕ್ ಗಳನ್ನು ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology