ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಲಾದ ಸರ್ಕಾರಿ ... ರೋಬೋಟಿಕ್ಸ್" ಎಂಬ ಹೂಸ ಅನುದಾನರಹಿತ ಡಿಪ್ಲೋಮಾ ಕೋರ್ಸ್ಗಳನ್ನು ಪ್ರಾರಂಭಿಸಲು
ಬೆಂಗಳೂರು.21.ಮಾರ್ಚ್.26: ರಾಜ್ಯದ ಒಟ್ಟು 51 ಸರ್ಕಾರಿ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರೊಬೋಟಿಕ್ಸ್ ಮತ್ತು (ಕೃತಕ ಬುದ್ಧಿಮತ್ತೆ) ಕಲಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಲಾಗಿದೆ.
ಪ್ರಸ್ತುತ ಕಾಲಕ್ಕೆ ತಕ್ಕಂತೆ ಮತ್ತು ಅಗತ್ಯವಾಗಿರುವ ಉದಯೋನ್ಮುಖ ಕೋರ್ಸ್ಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದೆ.
ಅದರಂತೆ 7 ಎಂಜಿನಿಯರಿಂಗ್ ಕಾಲೇಜು ಮತ್ತು 44 ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ರೋಬೋಟಿಕ್ಸ್ ಎಂಜಿನಿಯರಿಂಗ್ ಮತ್ತು ಕೃತಕ ಬುದ್ಧಿಮತ್ತೆ ಹಾಗೂ ಮೆಷಿನ್ ಲರ್ನಿಂಗ್ ಕೋರ್ಸ್ಗಳನ್ನು ಕಲಿಸಲು ಸಿದ್ಧತೆ ನಡೆಸಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಹೇಳಿದ್ದಾರೆ.
ಹಾಗೆಯೇ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿನ 941 ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ.
ಇನ್ನು ಬೋಧಕೇತರ ಹುದ್ದೆಗಳಾದ ಪ್ರಥಮ ದರ್ಜೆ ಸಹಾಯಕರ ಹುದ್ದೆ 66 ಮತ್ತು ದ್ವಿತೀಯ ದರ್ಜೆ ಸಹಾಯಕರ 27 ಹುದ್ದೆಗಳನ್ನು ಭರ್ತಿ ಮಾಡಲು ಕೆಇಎಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.






Any questions related to ರಾಜ್ಯದ 51 ಸರ್ಕಾರಿ ಕಾಲೇಜುಗಳಲ್ಲಿ ರೊಬೋಟಿಕ್ಸ್, ಎ.ಐ. ಕೋರ್ಸ್: ಉನ್ನತ ಶಿಕ್ಷಣ ಸಚಿವ?