Home » ಲೈವ್ ನ್ಯೂಸ್ » ಬ್ಯಾಲಹಳ್ಳಿ(ಕೆ) ಗ್ರಾಮದಲ್ಲಿ ಸುಮಾರು 22.5 ಕೋಟಿ ರೂ. ವೆಚ್ಚದ ನೂತನ 110/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಸಚಿವ ಈಶ್ವರ ಖಂಡ್ರೆ ಅವರಿಂದ ಶಂಕುಸ್ಥಾಪನೆ

ಬ್ಯಾಲಹಳ್ಳಿ(ಕೆ) ಗ್ರಾಮದಲ್ಲಿ ಸುಮಾರು 22.5 ಕೋಟಿ ರೂ. ವೆಚ್ಚದ ನೂತನ 110/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಸಚಿವ ಈಶ್ವರ ಖಂಡ್ರೆ ಅವರಿಂದ ಶಂಕುಸ್ಥಾಪನೆ

Facebook
X
WhatsApp
Telegram

ಬೀದರ, ಮೇ.19:- ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ(ಕೆ) ಗ್ರಾಮದಲ್ಲಿ ಸುಮಾರು 22.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ 110/11 ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.


ನಂತರ ಮಾತನಾಡಿ, ಈ ವಿದ್ಯುತ್ ಉಪಕೇಂದ್ರ ಸ್ಥಾಪನೆಯಿಂದ ಬ್ಯಾಲಹಳ್ಳಿ(ಕೆ) ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಾಗಲಿದ್ದು, ರೈತರು, ವಿದ್ಯಾರ್ಥಿಗಳು, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು.


ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ಮೂಲಸೌಕರ್ಯಗಳ ಬಲವರ್ಧನೆ ಅತ್ಯಂತ ಅಗತ್ಯವಾಗಿದ್ದು, ರಾಜ್ಯ ಸರ್ಕಾರ ವಿದ್ಯುತ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.


ಈ ಯೋಜನೆಯಿಂದ ಪ್ರದೇಶದ ವಿದ್ಯುತ್ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದ್ದು, ಕೃಷಿ ಚಟುವಟಿಕೆಗಳು ಹಾಗೂ ಸ್ಥಳೀಯ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಹಾಗೂ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology