Home » ಲೈವ್ ನ್ಯೂಸ್ » ರಾಜ್ಯದಲ್ಲಿ 60 ಕಿ.ಮೀ ವೇಗದ ಸುಂಟರಗಾಳಿ ಅಬ್ಬರ, ಈ 5 ಜಿಲ್ಲೆಗಳ ಹವಾಮಾನ ಇಲಾಖೆ ಅಲರ್ಟ್!

ರಾಜ್ಯದಲ್ಲಿ 60 ಕಿ.ಮೀ ವೇಗದ ಸುಂಟರಗಾಳಿ ಅಬ್ಬರ, ಈ 5 ಜಿಲ್ಲೆಗಳ ಹವಾಮಾನ ಇಲಾಖೆ ಅಲರ್ಟ್!

Facebook
X
WhatsApp
Telegram

ಬೆಂಗಳೂರು.20.ಮೇ.26: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ಜನತೆಗೆ ತಂಪಾದ ಅನುಭವದ ಜೊತೆಗೆ ಆತಂಕವೂ ಎದುರಾಗಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ನೈರುತ್ಯ ಮುಂಗಾರು ಮಾರುತಗಳು ವೇಗವಾಗಿ ಚಲಿಸುತ್ತಿದ್ದು, ಮೇ 26ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಗುಡುಗು ಸಹಿತ ಮಳೆ ಮತ್ತು ಅತಿ ವೇಗದ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ ‘ಎಲ್ಲೋ ಅಲರ್ಟ್’ ಘೋಷಿಸಿದೆ ಮಾಡಿದ್ದಾರೆ.

ಹವಾಮಾನ ಇಲಾಖೆಯ ವರದಿಯಂತೆ, ಇಂದು (ಮೇ 19) ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ 40 ರಿಂದ 50 ಕಿ.ಮೀ ಇರಲಿದೆ. ಗುಡುಗು ಸಿಂಚನದ ಜೊತೆಗೆ ಈ ಬಲವಾದ ಗಾಳಿಯು ಮರಗಳು ಮತ್ತು ವಿದ್ಯುತ್ ಕಂಬಗಳಿಗೆ ಹಾನಿ ಮಾಡುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Heavy Rainfall) ಮುನ್ಸೂಚನೆಯಿದೆ. ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ಚದುರಿದಂತೆ ಮಳೆಯಾಗಲಿದ್ದು, ಇಲ್ಲಿಯೂ ಕೂಡ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಮಳೆಯಾಗಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ಮೀನುಗಾರರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ತಿಳಿಸಲಾಗಿದೆ.


ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ನಂತರ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 21°C ದಾಖಲಾಗುವ ಸಂಭವವಿದೆ.


ಸದ್ಯ ಮುಂಗಾರು ಮಾರುತಗಳು ಆಗ್ನೇಯ ಅರಬ್ಬೀ ಸಮುದ್ರ, ಅಂಡಮಾನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹಲವು ಭಾಗಗಳಲ್ಲಿ ಆವರಿಸಿವೆ. ಮುಂದಿನ 3-4 ದಿನಗಳಲ್ಲಿ ಇವು ಕೇರಳದ ಕಡೆಗೆ ಮುನ್ನಡೆಯಲು ಪೂರಕವಾದ ವಾತಾವರಣವಿದೆ. ಉತ್ತರ ಪ್ರದೇಶದಿಂದ ಕೇರಳದವರೆಗೆ ಹರಡಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology