Home » ಲೈವ್ ನ್ಯೂಸ್ » ಸರ್ಕಾರಿ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮತಿ.

ಸರ್ಕಾರಿ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮತಿ.

Facebook
X
WhatsApp
Telegram

ಬೆಂಗಳೂರು.24.ಮೇ.26: ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಒಟ್ಟು 51,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅಧಿಕೃತವಾಗಿ ಮಂಜೂರಾತಿ ನೀಡಿದೆ.ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮೇ 24, 2026 ರಂದು ಆದೇಶ ಹೊರಡಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಶಿಕ್ಷಕರನ್ನು ಭರ್ತಿ ಮಾಡಲು ಅನುಮತಿ.

ನೇಮಕಾತಿಯ ವಿವರಗಳು ಹೀಗಿವೆ:

ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಒಟ್ಟು 51,000 ಹುದ್ದೆಗಳನ್ನು ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ:
ಸರ್ಕಾರಿ ಪ್ರಾಥಮಿಕ ಶಾಲೆಗಳು: 40,000 ಅತಿಥಿ ಶಿಕ್ಷಕರು.
ಸರ್ಕಾರಿ ಪ್ರೌಢ ಶಾಲೆಗಳು: 11,000 ಅತಿಥಿ ಶಿಕ್ಷಕರು.
ನೇಮಕಾತಿಯ ಉದ್ದೇಶ ಮತ್ತು ಷರತ್ತುಗಳು:

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬೋಧಕರ ಕೊರತೆಯಿಂದಾಗಿ ಮಕ್ಕಳ ವ್ಯಾಸಂಗಕ್ಕೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ನೇಮಕಾತಿಯು ಈ ಕೆಳಗಿನ ಷರತ್ತುಗಳಿಗೆ ಒಳಪಟ್ಟಿರುತ್ತದೆ:

ತಾತ್ಕಾಲಿಕ ನೇಮಕಾತಿ: ಈ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ.

ಅವಧಿ: ಖಾಯಂ ಶಿಕ್ಷಕರು ಬರುವವರೆಗೆ ಅಥವಾ 2026-27ನೇ ಶೈಕ್ಷಣಿಕ ವರ್ಷದ ಅಂತ್ಯದವರೆಗೆ (ಯಾವುದು ಮೊದಲೋ ಅಲ್ಲಿಯವರೆಗೆ) ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸಬಹುದಾಗಿದೆ.

ನೇರ ನೇಮಕಾತಿ: ಸ್ಥಳೀಯವಾಗಿ ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.

ಶಾಲಾ ಆರಂಭದ ದಿನವೇ ಶಿಕ್ಷಕರ ಲಭ್ಯತೆ:

ಸಾಮಾನ್ಯವಾಗಿ ಶೈಕ್ಷಣಿಕ ವರ್ಷ ಆರಂಭವಾದ ನಂತರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ ಈ ಬಾರಿ ಹವಾಮಾನ ಮತ್ತು ಶೈಕ್ಷಣಿಕ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು, ಶಾಲಾ ಆರಂಭದ ದಿನವೇ ಶಿಕ್ಷಕರು ಲಭ್ಯವಿರಬೇಕು ಎಂಬ ಉದ್ದೇಶದಿಂದ ಮುಂಚಿತವಾಗಿಯೇ ಆದೇಶ ಹೊರಡಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದ ಶಾಲೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಮುಂದಿನ ಪ್ರಕ್ರಿಯೆ:

ಆಯಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಆಧರಿಸಿ, ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಅತಿಥಿ ಶಿಕ್ಷಕರ ಗೌರವಧನ ಪಾವತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ಈಗಾಗಲೇ ಸಹಮತಿ ನೀಡಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವುದು ಖಚಿತವಾದಂತಾಗಿದೆ. ಅಲ್ಲದೆ, ಡಿ.ಇಡಿ ಮತ್ತು ಬಿ.ಇಡಿ ಪದವಿ ಪಡೆದು ಉದ್ಯೋಗದ ನಿರೀಕ್ಷೆಯಲ್ಲಿದ್ದ ಸಾವಿರಾರು ಅಭ್ಯರ್ಥಿಗಳಿಗೆ ಇದು ದೊಡ್ಡ ಮಟ್ಟದ ಉದ್ಯೋಗಾವಕಾಶವನ್ನು ಕಲ್ಪಿಸಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology