ಬೆಂಗಳೂರು.01.ಜೂನ್.26: ರಾಜ್ಯದಲ್ಲಿ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಈ ಸಂಬಂಧ ಪ್ರಕಟಣೆ ಮಾಡಿದ್ದಾರೆ.ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ಮಾಡಲಿದ್ದಾರೆ.
ಜೂ.9 ರಂದು ನಾಮಪತ್ರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಸಿಂಧುವಾದ ನಾಮಪತ್ರಗಳ ಪ್ರಕಟಣೆ ಹೊರಡಿಸಲಾಗುತ್ತದೆ. ಜೂನ್ 11 ರವರೆಗೆ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇನ್ನು ಅಂದೆ ಸಂಜೆ 5 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ನಡೆಯಲಿದೆ.
ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು (ಕಾಂಗ್ರೆಸ್), ನಾಸಿರ್ ಅಹಮದ್ (ಕಾಂಗ್ರೆಸ್), ಎಂಟಿಬಿ ನಾಗರಾಜ್ (ಬಿಜೆಪಿ), ಪ್ರತಾಪ್ ಸಿಂಹ ನಾಯಕ್ ಕೆ(ಬಿಜೆಪಿ)., ತಿಪ್ಪಣ್ಣಪ್ಪ (ಕಾಂಗ್ರೆಸ್), ಸುನೀಲ್ ವಲ್ಯಾಪುರೆ (ಬಿಜೆಪಿ), ಬಿ.ಕೆ.ಹರಿಪ್ರಸಾದ್ (ಕಾಂಗ್ರೆಸ್) ಅವರ ಅವಧಿ ಜೂ. 30 ರಂದು ಮುಕ್ತಾಯಗೊಳ್ಳಲಿದೆ. ಇವರ ನಿವೃತ್ತಿಯಿಂದ ತೆರವಾಗುವ ಮೇಲ್ಮನೆ ಸದಸ್ಯ ಸ್ಥಾನಕ್ಕೆ ಭಾರತೀಯ ಚುನಾವಣಾ ಆಯೋಗವು ಪ್ರಕಟಣೆ ಹೊರಡಿಸಿದ್ದು, ಅದರಂತೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ.






Any questions related to ವಿಧಾನಪರಿಷತ್ನ 7 ಸದಸ್ಯ ಸ್ಥಾನಕ್ಕೆ ಚುನಾವಣೆ ಅಧಿಸೂಚನೆ.!?