Home » ಲೈವ್ ನ್ಯೂಸ್ » ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ
ಆಯ್ಕೆಯಾದ ಸಂಶೋಧನಾ ಪ್ರಬಂಧಕ್ಕೆ ನಗದು ಬಹುಮಾನ

ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ
ಆಯ್ಕೆಯಾದ ಸಂಶೋಧನಾ ಪ್ರಬಂಧಕ್ಕೆ ನಗದು ಬಹುಮಾನ

Facebook
X
WhatsApp
Telegram


ಬೀದರ.26.ಜೂನ್.26:- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 2026ರ ಜುಲೈ 16 ರಿಂದ 18ರ ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಆರ್ ಅವರು ತಿಳಿಸಿದ್ದಾರೆ.

     ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಯುವ ಉದ್ಯಮದಾರರು ಭಾಗವಹಿಸಬೇಕು, ಅಲ್ಲದೇ, ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧವನ್ನು ಸಹ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಸಂಶೋಧನಾ ಪ್ರಬಂಧಕ್ಕೆ ನಗದು ಬಹುಮಾನವನ್ನು ನೀಡಲಾಗುವುದು, ಆಸಕ್ತರು  Registration Link : https://forms.gle/xn1ek2pwuBTXmNyz7) 2026ರ ಜುಲೈ 10ರ ಒಳಗೆ ನೋಂದಾಯಿಸಿಕೊಳ್ಳಬೇಕು.

     ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿಗಳನ್ನು ಮೊ.ನಂ.9620767819, 9743084194ಗೆ ಅಥವಾ ವೆಬ್‌ಸೈಟ್  kstacademy.in ನಲ್ಲಿ  ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology