ಬೆಂಗಳೂರು.30.ಜೂನ್.26:ರಾಜ್ಯ ಸರ್ಕಾರದಿಂದ 78 ಸಹಾಯಕ ಪೊಲೀಸ್ ಉಪನಿರೀಕ್ಷಕರನ್ನು (ASI) ವರ್ಗಾವಣ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಟ್ಟು 78 ಸಹಾಯಕ ಪೊಲೀಸ್ ಉಪನಿರೀಕ್ಷಕರನ್ನು (ASI) ತಕ್ಷಣದಿಂದ ಜಾರಿಗೆ ಬರುವಂತೆ ಸಾಮಾನ್ಯ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಒಟ್ಟು ವರ್ಗಾವಣೆ: 78 ಎಎಸ್ಐ (ASI) ಅಧಿಕಾರಿಗಳು.
ಪ್ರಕ್ರಿಯೆ: ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೌನ್ಸಿಲಿಂಗ್ ನಡೆಸಿ ಸ್ಥಳ ನಿಯುಕ್ತಿ ಮಾಡಲಾಗಿದೆ.
ಆದೇಶ: ಉಪ ಪೊಲೀಸ್ ಆಯುಕ್ತರು (ಆಡಳಿತ), ಬೆಂಗಳೂರು ನಗರ ರವರಿಂದ ಅಧಿಕೃತ ಸಹಿ.
ತಕ್ಷಣವೇ ಕರ್ತವ್ಯಕ್ಕೆ ವರದಿ ಮಾಡಲು ಸೂಚನೆ:
ವರ್ಗಾವಣೆಗೊಂಡಿರುವ ಎಲ್ಲಾ ಎಎಸ್ಐ ಅಧಿಕಾರಿಗಳನ್ನು ಪ್ರಸ್ತುತ ಕರ್ತವ್ಯದಿಂದ ಕೂಡಲೇ ಬಿಡುಗಡೆಗೊಳಿಸಿ, ಅವರು ನಿಯುಕ್ತಿಗೊಂಡಿರುವ ಹೊಸ ಪೊಲೀಸ್ ಠಾಣೆ/ವಿಭಾಗಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಆಯಾ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಕರ್ತವ್ಯದಿಂದ ಬಿಡುಗಡೆ ಹಾಗೂ ವರದಿ ಮಾಡಿದ ಬಗ್ಗೆ ಪಾಲನಾ ವರದಿಯನ್ನು ಕಚೇರಿಗೆ ಸಲ್ಲಿಸಲು ಆದೇಶದಲ್ಲಿ ತಿಳಿಸಿದ್ದಾರೆ.








Any questions related to ರಾಜ್ಯ ಸರ್ಕಾರದಿಂದ 78 ಸಹಾಯಕ ಪೊಲೀಸ್ ಉಪನಿರೀಕ್ಷಕರನ್ನು (ASI) ವರ್ಗಾವಣೆ ಆದೇಶ.?