ರಾಜ್ಯ ಸರ್ಕಾರ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಹಿ ಸುಧಿ ನೀಡುತ್ತಿದೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ವಸತಿ ಶಾಲೆಗಳು, ಕಾಲೇಜುಗಳು ಹಾಗೂ ಆಡಳಿತ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3,409 ಹುದ್ದೆಗಳನ್ನು ನೇರ ನೇಮಕಾತಿ ಮತ್ತು ಹಂಗಾಮಿ/ಅತಿಥಿ ಆಧಾರದ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳು, ಮೋರಾರ್ಜಿ ದೇಸಾಯಿ ವಸತಿ ಶಾಲೆಗಳು, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು ಹಾಗೂ ವಿವಿಧ ವಸತಿ ನಿಲಯಗಳಲ್ಲಿ ಅಗತ್ಯ ಸಿಬ್ಬಂದಿಯನ್ನು ನೇಮಕಗೆ ಸಿದ್ಧರಾಗಿದೆ.
ವಿವಿಧ ವಿಭಾಗದಲ್ಲಿ ಎಷ್ಟು ಹುದ್ದೆಗಳು?
ಆದೇಶದ ಪ್ರಕಾರ,
ನೇರ ನೇಮಕಾತಿ ಹುದ್ದೆಗಳು – 1,469
ಹಂಗಾಮಿ/ಅತಿಥಿ ಶಿಕ್ಷಕರು ಮತ್ತು ಸಿಬ್ಬಂದಿ – 1,940
ಒಟ್ಟು ಹುದ್ದೆಗಳು – 3,409
ಯಾವ ಹುದ್ದೆಗಳು ಭರ್ತಿಯಾಗಲಿವೆ?
ನೇಮಕಾತಿಯಲ್ಲಿ ಈ ಕೆಳಗಿನ ಹುದ್ದೆಗಳು ಸೇರಿವೆ.
ಪ್ರಾಂಶುಪಾಲರು
ಮುಖ್ಯ ಶಿಕ್ಷಕರು
ಪದವಿ ಪೂರ್ವ ಕಾಲೇಜು ಉಪನ್ಯಾಸಕರು
ಪ್ರೌಢಶಾಲಾ ಶಿಕ್ಷಕರು
ಪ್ರಾಥಮಿಕ ಶಾಲಾ ಶಿಕ್ಷಕರು
ದೈಹಿಕ ಶಿಕ್ಷಣ ಶಿಕ್ಷಕರು
ಕಲಾ ಶಿಕ್ಷಕರು
ವಿಜ್ಞಾನ ಶಿಕ್ಷಕರು
ಹಿಂದಿ ಶಿಕ್ಷಕರು
ಸಮಾಜ ವಿಜ್ಞಾನ ಶಿಕ್ಷಕರು
ಗಣಿತ ಶಿಕ್ಷಕರು
ಇತಿಹಾಸ, ಅರ್ಥಶಾಸ್ತ್ರ, ವಾಣಿಜ್ಯ ಹಾಗೂ ಇತರೆ ವಿಷಯಗಳ ಉಪನ್ಯಾಸಕರು
ಅಡುಗೆ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳು
ನೇಮಕಾತಿ ಹೇಗೆ ನಡೆಯಲಿದೆ?
ಸರ್ಕಾರದ ಆದೇಶದಂತೆ, ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಾದ ಹುದ್ದೆಗಳಿಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ನಡೆಸಲಾಗುತ್ತದೆ. ಹಂಗಾಮಿ/ಅತಿಥಿ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ಇಲಾಖೆಯ ಮಾರ್ಗಸೂಚಿಯಂತೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಹೆಚ್ಚಿನ ಹುದ್ದೆಗಳು
ಆದೇಶದ ಪ್ರಕಾರ, ಮೋರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಿಗೆ 800 ಹುದ್ದೆಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2,050 ಹುದ್ದೆಗಳು, ಹಾಗೂ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆಗಳಿಗೆ ಪ್ರತ್ಯೇಕ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ.
ಸರ್ಕಾರದ ಆದೇಶದಲ್ಲಿ ಏನಿದೆ?
ಸರ್ಕಾರವು ಹೊರಡಿಸಿರುವ ಆದೇಶದಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಅಗತ್ಯ ಅರ್ಹತೆ ಹಾಗೂ ನೇಮಕಾತಿ ನಿಯಮಾವಳಿಗಳ ಪ್ರಕಾರ ಮುಂದಿನ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.











Any questions related to ?