ಬೆಂಗಳೂರು.03.ಜುಲೈ.26: ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಇಡೀ ಆವರಣದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಚೇರಿಯ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದ್ದು, ಯಾವುದೇ ಕ್ಷಣದಲ್ಲಾದರೂ ಬ್ಲಾಸ್ಟ್ ಮಾಡಲಾಗುವುದು ಎಂದು ಇ-ಮೇಲ್‌ನಲ್ಲಿ ಮುಖಾಂತರ ಬೆದರಿಕೆ ಹಾಕಲಾಗಿದೆ ಈ ಮಾಹಿತಿ ಇಸ್ರೋ ಆಡಳಿತ್ ಮಂಡಳಿ ವತಿಯಿಂದ ನೀಡಲಾಗಿದೆ.
ಇಸ್ರೋ ಆಡಳಿತ ಮಂಡಳಿಯು ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದೆ. ಘಟನಾ ಸ್ಥಳಕ್ಕೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ, ಸ್ಥಳೀಯ ಪೊಲೀಸರು, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನ ದಳದೊಂದಿಗೆ ಧಾವಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕಚೇರಿಯಲ್ಲಿದ್ದ ಸಿಬ್ಬಂದಿ ಹಾಗೂ ವಿಜ್ಞಾನಿಗಳನ್ನು ತಕ್ಷಣವೇ ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ. ಸದ್ಯ ಇಡೀ ಕಚೇರಿ ಆವರಣವನ್ನು ಪೊಲೀಸರು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದು, ಪ್ರತಿಯೊಂದು ಮೂಲೆ ಮೂಲೆಯಲ್ಲೂ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ಭಾರತದ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾಗಿದ್ದು, ಕರ್ನಾಟಕದ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. 1969ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಬಾಹ್ಯಾಕಾಶ ತಂತ್ರಜ್ಞಾನದ ಸಂಶೋಧನೆ, ಉಪಗ್ರಹಗಳ ಉಡಾವಣೆ ಮತ್ತು ಗ್ರಹಗಳ ಅನ್ವೇಷಣೆಯಲ್ಲಿ ವಿಶ್ವದ ಪ್ರಮುಖ ಬಾಹ್ಯಾಕಾಶ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಇಸ್ರೋ ಸಂಸ್ಥೆಯು ಶೂನ್ಯದಿಂದ ಆರಂಭಿಸಿ ಇಂದು ವಿಶ್ವದ ಬಲಿಷ್ಠ ಬಾಹ್ಯಾಕಾಶ ಸಂಸ್ಥೆಯಾಗಿ ಬೆಳೆದು ನಿಂತಿದೆ.





Any questions related to ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್!?