Home » ಲೈವ್ ನ್ಯೂಸ್ » ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಎಂಟನೇ ದಿನಕ್ಕೆ 11,39,824 ಗಣತಿ ನಮೂನೆ ವಿತರಣೆ

ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಎಂಟನೇ ದಿನಕ್ಕೆ 11,39,824 ಗಣತಿ ನಮೂನೆ ವಿತರಣೆ

Facebook
X
WhatsApp
Telegram

ಕೊಪ್ಪಳ.08.ಜುಲೈ 26: ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 7ರ ಸಂಜೆ 06 ಗಂಟೆವರೆಗೆ ಒಟ್ಟು 11,39,824 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.


ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಗೆ ವಿತರಿಸಲಾಗಿರುತ್ತದೆ. ಇಲ್ಲಿಯವರೆಗೆ ಒಟ್ಟು 11,39,824 ಗಣತಿ ನಮೂನೆಗಳನ್ನು (Enumeration Forms) ಮತದಾರರಿಗೆ ಹಂಚಿಕೆ ಮಾಡಲಾಗಿದ್ದು, 2,12,614 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology