Home » ಲೈವ್ ನ್ಯೂಸ್ » ಹೆಣ್ಣುಮಕ್ಕಳ ರಕ್ಷಿಸುವ ಎಚ್‌ಪಿವಿ ಲಸಿಕೆ: ಡಾ.ನಂದಿತಾ ಎಮ್.ಎನ್.

ಹೆಣ್ಣುಮಕ್ಕಳ ರಕ್ಷಿಸುವ ಎಚ್‌ಪಿವಿ ಲಸಿಕೆ: ಡಾ.ನಂದಿತಾ ಎಮ್.ಎನ್.

Facebook
X
WhatsApp
Telegram

ರಾಯಚೂರು.08.ಜುಲೈ .26: ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್ ಅವರು ಹೇಳಿದರು.
ಜುಲೈ 08ರ ಬುಧವಾರ ದಂದು ನಗರದ ಬೊಳಮಾನದೊಡ್ಡಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಎಚ್.ಪಿ.ವಿ ಲಸಿಕೆ ಕುರಿತು ಜಾಗೃತಿ ಮೂಡಿಸಿ ಮಾತನಾಡಿದರು.


ಸಾಮಾನ್ಯವಾಗಿ ಕ್ಯಾನ್ಸರ್ ಎಂಬ ಶಬ್ಧವೇ ಒಂದು ರೀತಿಯಲ್ಲಿ ಭಯ, ಆತಂಕ ಹುಟ್ಟಿಸುತ್ತದೆ, ಅದರಲ್ಲೂ ಹೆಣ್ಣು ಮಕ್ಕಳಲ್ಲಿ ಕಂಡು ಬರುವ ಗರ್ಭಕಂಠದ ಕ್ಯಾನ್ಸರ್ ಅತ್ಯಂತ ಮಾರಕವಾಗಿದ್ದು, ಭವಿಷ್ಯದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಮುಕ್ತಗೊಳಿಸಲು ನೆಮ್ಮದಿಯ ಜೀವನ ನಡೆಸಲು ಪ್ರಸ್ತುತ 14 ವರ್ಷದ ಹೆಣ್ಣು ಮಕ್ಕಳಿಗೆ ಎಲ್ಲ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಹಾಕಲಾಗುವ ಹೆಚ್.ಪಿ.ವಿ ಲಸಿಕೆಯನ್ನು ಪಾಲಕರು ಯಾವುದೇ ಹಿಂದೇಟು ಹಾಕದೆ ಹಾಕಿಸುವುದು ಅತ್ಯಗತ್ಯವಾಗಿದೆ ಎಂದರು.


ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗೆ ಈ ಲಸಿಕೆ ಅತ್ಯಂತ ಉಪಯುಕ್ತವಾಗಿದ್ದು, ಜಿಲ್ಲೆಯಾದ್ಯಂತ ಲಸಿಕೆ ಹಾಕಲಾಗುತ್ತಿದ್ದು, ಈಗಾಗಲೇ ರಾಯಚೂರು ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಶೇ.60ರಷ್ಟು ವಿದ್ಯಾರ್ಥಿನಿಯರಿಗೆ ಲಸಿಕೆ ಹಾಕಲಾಗಿದೆ. ಪಾಲಕರು ಸ್ವಯಂ ಮುಂದೆ ಬಂದು ಹಾಕಿಸುತ್ತಿದ್ದಾರೆ ಎಂದರು.


ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಲಸಿಕೆ ಬಗ್ಗೆ ತಪ್ಪು ಮಾಹಿತಿ ನೀಡಿದ್ದು, ಕಂಡು ಬಂದಿದೆ. ಸಾರ್ವಜನಿಕರು ಯಾವುದೇ ತಪ್ಪು ಮಾಹಿತಿಗೆ ಕಿವಿಗೊಡದೆ ಭವಿಷ್ಯದ ದೃಷ್ಟಿಯಿಂದ ತಮ್ಮ ಕುಟುಂಬದ 14 ವರ್ಷದ ಹೆಣ್ಣು ಮಗಳಿಗೆ ಉಚಿತವಾಗಿ ಹೆಚ್.ಪಿ.ವಿ (ಹೂಮನ್ ಪ್ಯಾಪಿಲೋಮ ವೈರಸ್) ವಿರುದ್ಧದ ಲಸಿಕೆ ತಪ್ಪದೆ ಹಾಕಿಸಿ. ಇದಕ್ಕಾಗಿ ಎಲ್ಲ ಸತಕಾರಿ ಆರೋಗ್ಯ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪೋಷಕರು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಉಚಿತವಾಗಿ ಲಸಿಕೆ ಹಾಕಿಸಲು ಕೋರಿದರು.


ಗರ್ಭಕಂಠದ ಕ್ಯಾನ್ಸರ್ ಉಂಟಾಗುವ ಕಾರಣಗಳು: ಮಕ್ಕಳಲ್ಲಿ ಸಾಮಾನ್ಯವಾಗಿ ವೈಯಕ್ತಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು, ಅಸುರಕ್ಷಿತ ಲೈಂಗಿಕ ಸಂಪರ್ಕದಿAದ ಹರಡುವ ಹೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಸೋಂಕು ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಕ್ಯಾನ್ಸರ್ ಆಗಿ ಬದಲಾವಣೆಯಾಗುತ್ತದೆ. ಈ ಹಿನ್ನಲೆಯಲ್ಲಿ ಮಾರಕವಾಗುವುದನ್ನು ತಡೆಯಲು ಎಚ್.ಪಿ.ವಿ ಲಸಿಕೆಯು ಸೂಕ್ತವಾಗಿದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ತಿಳಿಸಿದರು.
ಬೊಳಮಾನದೊಡ್ಡಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 36 ವಿದ್ಯಾರ್ಥಿನಿಯರಿಗೆ ಎಚ್.ಪಿ.ವಿ ಲಸಿಕೆ ನೀಡಲಾಯಿತು.


ಇದೇ ಸಂದರ್ಭದಲ್ಲಿ ಹರಿಜನವಾಡಾ ಯುಪಿಹೆಚ್‌ಸಿಯ ವೈದ್ಯಾಧಿಕಾರಿ ಡಾ.ಸುನೀಲ್, ಜಹೀರಬಾದ್ ಯುಪಿಹೆಚ್‌ಸಿಯ ವೈದ್ಯಾಧಿಕಾರಿ ಡಾ.ಶ್ವೇತಾಂಬರಿ, ಪ್ರಾಂಶುಪಾಲರಾದ ನಾಶಿ ಬೇಗಂ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜ ಕೆ, ನಿಲಯಪಾಲಕರಾದ ರೇವಣ ಸಿದ್ದಪ್ಪ, ಶುಶ್ರೂಷಣಾಧಿಕಾರಿ ಹುಸ್ನಾ ಬೇಗಂ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಮಂಜುಳಾ ಸೇರಿದಂತೆ ವಿಧ್ಯಾರ್ಥಿನಿಯರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology