Home » ಲೈವ್ ನ್ಯೂಸ್ » ಹೊಸ ವಾಹನ ಒದಗಿಸಲು ಆಸಕ್ತರಿಂದ ಅರ್ಜಿ ಆಹ್ವಾನ

ಹೊಸ ವಾಹನ ಒದಗಿಸಲು ಆಸಕ್ತರಿಂದ ಅರ್ಜಿ ಆಹ್ವಾನ

ರಾಯಚೂರು.09.ಜುಲೈ 26: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧೀನದಲ್ಲಿರುವ ಜಿಲ್ಲಾ ಕ್ಷಯರೋಗ ವಿಭಾಗದ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ 2026-27ನೇ ಸಾಲಿಗಾಗಿ ಸಂಚಾರಿ ಆರೋಗ್ಯ ಘಟಕ ತಾಲ್ಲೂಕು ಮಟ್ಟಕ್ಕೆ 4 ಬಾಡಿಗೆ 4 ಚಕ್ರದ ವಾಹನ ಒದಗಿಸಲು ಅರ್ಹ ಮಾಲೀಕರಿಂದ ಅರ್ಜಿ ಅಹ್ವಾನಿಸಲಾಗಿದೆ.


ಆಸಕ್ತರು ಜುಲೈ 13ರ ಸಂಜೆ 5ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology