Home » ಲೈವ್ ನ್ಯೂಸ್ » ಶಾಲಾ ಶಿಕ್ಷಣ ಇಲಾಖೆ ಬೋಧಕೇತರ ಸಿಬ್ಬಂದಿ ವರ್ಗಾವಣೆ ವೇಳಾಪಟ್ಟಿ ಪ್ರಕಟ

ಶಾಲಾ ಶಿಕ್ಷಣ ಇಲಾಖೆ ಬೋಧಕೇತರ ಸಿಬ್ಬಂದಿ ವರ್ಗಾವಣೆ ವೇಳಾಪಟ್ಟಿ ಪ್ರಕಟ

Facebook
X
WhatsApp
Telegram

ಬೆಂಗಳೂರು.09.ಜುಲೈ.26: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಧ್ಯಾಹ್ನ ಬಿಸಿಯೂಟ “ಅಕ್ಷರ ದಾಸೋಹ”  ಯೋಜನೆಗೆ ಅಗತ್ಯವಿರುವ ಅಡುಗೆ ಸಿಬ್ಬಂದಿಯ  ನೇಮಕಾತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಶಾಲಾ ಶಿಕ್ಷಣ ಇಲಾಖೆಯು ಹೊಸದೊಂದು ಮಹತ್ವದ ಆದೇಶ ಹೊರಡಿಸಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಸದ್ಯ ಜನಪ್ರತಿನಿಧಿಗಳ ಆಡಳಿತ ಇಲ್ಲದಿರುವುದರಿಂದ ನೇಮಕಾತಿಗೆ ಎದುರಾಗಿದ್ದ ತಾಂತ್ರಿಕ ಅಡಚಣೆಯನ್ನು ನಿವಾರಿಸಲು ಸರ್ಕಾರ ಈ ತುರ್ತು ನಿರ್ಧಾರ ಮಾಡುಕೊಂಡಿದೆ.

ವರ್ಗಾವಣೆಪ್ರಕ್ರಿಯೆಯಪ್ರಮುಖದಿನಾಂಕಗಳು:



ಬೋಧಕೇತರ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಇಲಾಖೆ ನಿಗದಿಪಡಿಸಿರುವ ಮಹತ್ವದ ದಿನಾಂಕಗಳ ವಿವರ ಇಲ್ಲಿದೆ:

ಜುಲೈ 3 ರಿಂದ 6: ತಾತ್ಕಾಲಿಕ ಆದ್ಯತಾ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ.
ಜುಲೈ 9: ಸಲ್ಲಿಕೆಯಾದ ಆಕ್ಷೇಪಣೆಗಳ ಪರಿಶೀಲನೆ ಹಾಗೂ ಅಂತಿಮಗೊಳಿಸುವಿಕೆ.
ಜುಲೈ 10: ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಂತಿಮ ಆದ್ಯತಾ ಪಟ್ಟಿ ಪ್ರಕಟ.
ಜುಲೈ 13: ವರ್ಗಾವಣೆಗಾಗಿ ಅಧಿಕೃತ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭ.

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮಕ್ಕಳಿಗೆ ಸಮಸ್ಯೆ ಆಗದಂತೆ ತಡೆಯಲು ಕ್ರಮ ಸಾಮಾನ್ಯವಾಗಿ ಅಡುಗೆ ಸಿಬ್ಬಂದಿಯನ್ನು ಆಯ್ಕೆ ಮಾಡುವ ಸಮಿತಿಗೆ ಆಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರು ಅಥವಾ ನಗರ ಪ್ರದೇಶಗಳ ವಾರ್ಡ್ ಸದಸ್ಯರು ಮುಖ್ಯಸ್ಥರಾಗಿರುತ್ತಿದ್ದರು. ಆದರೆ ಪ್ರಸ್ತುತ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಗಿದಿರುವುದರಿಂದ ನೇಮಕಾತಿ ಪ್ರಕ್ರಿಯೆ ನನೆಗುದಿಗೆ ಬೀಳುವ ಆತಂಕ ಎದುರಾಗಿತ್ತು. ಇದರಿಂದ ಶಾಲಾ ಮಕ್ಕಳಿಗೆ ಸಕಾಲದಲ್ಲಿ ಊಟ ತಯಾರಿಸಲು ತೊಂದರೆಯಾಗಬಾರದು ಎಂಬ ಉದ್ದೇಶದಿಂದ, ಹೊಸ ಜನಪ್ರತಿನಿಧಿಗಳು ಆಯ್ಕೆಯಾಗುವವರೆಗೆ ಅಲ್ಲಿನ ಆಡಳಿತಾಧಿಕಾರಿಗಳಿಗೇ ಆಯ್ಕೆ ಸಮಿತಿಯ ಅಧ್ಯಕ್ಷರ ಜವಾಬ್ದಾರಿಯನ್ನು ತಾತ್ಕಾಲಿಕವಾಗಿ ನಿರ್ಧಾರ.

ಶಿಕ್ಷಣ ಇಲಾಖೆ ಕ್ರಮ ಏನು ?
ಜುಲೈ 8, 2026 ರಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಹೊರಬಿದ್ದಿರುವ ಸುತ್ತೋಲೆಯ ಪ್ರಕಾರ, ಆಯ್ಕೆ ಸಮಿತಿಯ ಅಧ್ಯಕ್ಷರ ಹುದ್ದೆಯನ್ನು ಹೊರತುಪಡಿಸಿ 2022 ರಲ್ಲಿದ್ದ ಉಳಿದ ನಿಯಮಗಳು ಮತ್ತು ಸಮಿತಿಯ ರಚನೆ ಮೊದಲಿನಂತೆಯೇ ಇರಲಿವೆ. ನೂತನ ಸಮಿತಿಯಲ್ಲಿ ಆಡಳಿತಾಧಿಕಾರಿಯು ಅಧ್ಯಕ್ಷರಾಗಿರುತ್ತಾರೆ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ (SDMC) ಅಧ್ಯಕ್ಷರು ಸದಸ್ಯರಾಗಿ ಮುಂದುವರಿಯಲಿದ್ದಾರೆ ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿ ಅಥವಾ ಪ್ರಧಾನ ಕಾರ್ಯದರ್ಶಿಯು ಕಾರ್ಯದರ್ಶಿಯಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.

ರಾಜ್ಯ ಶಿಕ್ಷಣ ಇಲಾಖೆಯ ಈ ಮಹತ್ವದ ನಿರ್ಧಾರದಿಂದಾಗಿ ರಾಜ್ಯದ ನಾನಾ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಅಡುಗೆ ಸಹಾಯಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಇನ್ಮುಂದೆ ವೇಗ ಪಡೆದುಕೊಳ್ಳಲಿದೆ. ಪರಿಣಾಮವಾಗಿ, ಯಾವುದೇ ಅಡಚಣೆಯಿಲ್ಲದೆ ಶಾಲಾ ವಿದ್ಯಾರ್ಥಿಗಳಿಗೆ ನಿರಂತರವಾಗಿ ಮಧ್ಯಾಹ್ನದ ಬಿಸಿಯೂಟ ಸಿಗುವಂತಾಗಲಿದೆ ಎಂದು ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ.

ಶಾಲಾ ಶಿಕ್ಷಣ ಇಲಾಖೆ ಬೋಧಕೇತರ ಸಿಬ್ಬಂದಿ ವರ್ಗಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗೆ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರ್ಕಾರದ ನಿಯಮಾವಳಿಗಳ ಅನ್ವಯ ಈಗಾಗಲೇ ಶೇಕಡಾ 4ರಷ್ಟು ಕೋರಿಕೆ ವರ್ಗಾವಣೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಮುಂದಿನ ಹಂತದಲ್ಲಿ ಒಂದೇ ಕಡೆ ದೀರ್ಘಾವಧಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಶೇಕಡಾ 20ರ ಮಿತಿಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಸಲು ಇಲಾಖೆ ಸಜ್ಜಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology