Home » ಲೈವ್ ನ್ಯೂಸ್ » ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರಿಂದ ಪೋಸ್ಟರ್ ಬಿಡುಗಡೆ

ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರಿಂದ ಪೋಸ್ಟರ್ ಬಿಡುಗಡೆ

ರಾಯಚೂರು.04.ಜುಲೈ 26: ರಾಯಚೂರು ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಜುಲೈ 03ರ ಶುಕ್ರವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕೃಷಿ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ ಬಿಮಾ (ವಿಮೆ) ಯೋಜನೆಯ ಹಾಗೂ ವಿವಿಧ ರಸಗೊಬ್ಬರ ದರಗಳ ಪಟ್ಟಿ ಕುರಿತು ಪೋಸ್ಟರ್ ಬಿಡುಗಡೆ ಮಾಡಿದರು.


ಇದೇ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವಾಣ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.

Author

ಪ್ರಮುಖ ಸುದ್ದಿ

Stock market

Astrology