ಬೆಂಗಳೂರು.10.ಜುಲೈ.26: ರಾಜ್ಯದಲ್ಲಿ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 800 ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ.
ರಾಜ್ಯ ಸರ್ಕಾರದ ಆದೇಶದಂತೆ 400 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ (Junior Lab Technician Officer) ಹಾಗೂ 400 ಫಾರ್ಮಸಿ ಅಧಿಕಾರಿ (Pharmacy Officer) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಕಾರ್ಯಾಚರಣೆಯಲ್ಲಿದೆ.
ರಾಜ್ಯದ ಸರ್ಕಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಸ್ಪತ್ರೆಗಳು ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವುದು ಮತ್ತು ಸಾರ್ವಜನಿಕರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಈ ನೇಮಕಾತಿ ಪ್ರಕ್ರಿಯೆಗೆ ಅನುಮೋದನೆ ನೀಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ನೇಮಕಾತಿ ನಡೆಯಲಿದೆ.
ಹುದ್ದೆಗಳ ಭರ್ತಿಗೆ ಸರ್ಕಾರ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ, ಅರ್ಜಿ ಸಲ್ಲಿಕೆ ದಿನಾಂಕ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಆಯ್ಕೆ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯುಳ್ಳ ಅಧಿಕೃತ ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆಯಿದೆ.
ಉದ್ಯೋಗಾಕಾಂಕ್ಷಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಪ್ರಕಟಣೆಗಳನ್ನು ನಿಯಮಿತವಾಗಿ ಪರಿಶೀಲಿಸುವಂತೆ ಇಲಾಖೆ ತಿಳಿಸಿದೆ. ಅಧಿಕೃತ ಅಧಿಸೂಚನೆ ಪ್ರಕಟವಾದ ಬಳಿಕವೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.





Any questions related to ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಒಪ್ಪಿಗೆ!?