Home » ಲೈವ್ ನ್ಯೂಸ್ » ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು.

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು.

Facebook
X
WhatsApp
Telegram

ಪ್ರಮುಖ ನಿರ್ಣಯಗಳು ಇಂತಿವೆ.

ಬೆಂಗಳೂರು.20.ಜುಲೈ.26: ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿನ ರೈತರಿಗೆ ಕೃಷಿ/ ತೋಟಗಾರಿಕೆ/ಪಶು ವೈದ್ಯಕೀಯ ಮತ್ತು ಇತರೆ ಸಂಬಂಧಿತ ಬೆಳೆ ಮೇಲ್ವಿಚಾರಣೆ ಮತ್ತು ಸಂಯೋಜಿತ ಡಿಜಿಟಲ್ ಸಲಹೆಗಳು, ಬೆಳೆ ಸಮೀಕ್ಷೆಯನ್ನು ಕೈಗೊಳ್ಳುವ ಕರ್ನಾಟಕ ಅಗ್ರಿಟೆಕ್ ಮಿಷನ್-2026ನ್ನು ರೂ.35.99 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಹೊಸದಾಗಿ ಮಂಜೂರು ಮಾಡಿರುವ ವಿದ್ಯಾರ್ಥಿನಿಲಯಗಳಿಗೆ 7,500 ಟೂ-ಟಯರ್ ಕಾಟ್ಗಳನ್ನು ಹಾಗೂ 15,000 ಹಾಸಿಗೆಗಳನ್ನು ಒಟ್ಟು ರೂ.29.98 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.



ಅಲೆಮಾರಿ/ ಅರೆ ಅಲೆಮಾರಿ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಮನೆಗಳನ್ನು ನಿರ್ಮಿಸುವ ಕುರಿತು ರೂ.10 ಲಕ್ಷಗಳ ಘಟಕ ವೆಚ್ಚದಲ್ಲಿ 380 ಚದರ ಅಡಿಗಳ ವಿಸ್ತೀರ್ಣದ ಮನೆಗಳನ್ನು ನಿರ್ಮಿಸಲು ಅನುಮೋದನೆ.



ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT), ರಾಯಚೂರಿನಲ್ಲಿ Al ಉತ್ಕೃಪ್ಯತಾ ಕೇಂದ್ರ (CoE-AI)ವನ್ನು 5 ವರ್ಷಗಳ ಅವಧಿಯಲ್ಲಿ ಒಟ್ಟು ರೂ.12 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಳಿತಾತ್ಮಕ ಅನುಮೋದನೆ.



ಬೆಂಗಳೂರಿನ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ MBBS ಮತ್ತು BDS ವಿದ್ಯಾರ್ಥಿಗಳಿಗೆ ಬಾಲಕರ ಹಾಸ್ಟೆಲ್ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ರೂ.83.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.



2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಹೆದ್ದಾರಿ SH-156ನ್ನು [ಕಟ್ಟಿಸಂಗವಿ, ಯನಗುಂಟಿ, ನರಿಬೋಳ, ಮಾಲ್-ಕೆ ಕ್ರಾಸ್ ಗ್ರಾಮಗಳನ್ನು ಒಳಗೊಂಡಂತೆ ಹಾಗೂ ಜಿಲ್ಲಾ ಮುಖ್ಯ ರಸ್ತೆಯನ್ನು (ಕೆಲ್ಲೂರು-ಅಂಡೋಳ)] ಅಭಿವೃದ್ಧಿ ಪಡಿಸುವ ಕಾಮಗಾರಿಗಳನ್ನು ರೂ.25 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

ಮೈಸೂರು ಜಿಲ್ಲೆಯ ನಂಜನಗೂಡು ನಗರ ವ್ಯಾಪ್ತಿಯಲ್ಲಿ, ಕಪಿಲಾ ನದಿಗೆ ನಂಜನಗೂಡು ನಗರ ವ್ಯಾಪ್ತಿಯ ಮಲಿನ ನೀರು ಸೇರದಂತೆ ಹಾಗೂ ಪ್ರವಾಹವನ್ನು ತಡೆಯಲು, ಸರ್ಕಾರಿ ಅತಿಥಿ ಗೃಹದಿಂದ ಶ್ರೀ ಪರಶುರಾಮ ದೇವಸ್ಥಾನದವರೆಗೆ ನದಿ ಮುಂಭಾಗದ ಅಭಿವೃದ್ಧಿ ಕಾಮಗಾರಿಗಳನ್ನು ರೂ.70 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನು ಅಮಾನತ್ತಿನಲ್ಲಿರಿಸಿರುವ ರಾಜ್ಯಪಾಲರ ಆದೇಶವನ್ನು ಸಚಿವ ಸಂಪುಟ ಅನುಮೋದಿಸಿದೆ.



ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ನೀರಾವರಿ ಜಲಮಂಡಳಿಯ 116 ಕೆರೆಗಳು ಹಾಗೂ ಗ್ರಾಯತ್ರಿ ಜಲಾಶಯದ ಕುಡಿಯುವ ನೀರು ತುಂಬಿಸುವ ಹಾಗೂ ಅಂತರ್ಜಲ ಅಭಿವೃದ್ಧಿ ಪಡಿಸುವ 244 ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology