Home » ಲೈವ್ ನ್ಯೂಸ್ » 20 ಜಿಲ್ಲೆಗಳಿಗೆ ಭಯಂಕರ ಮಳೆಯ ಹಿನ್ನಲೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

20 ಜಿಲ್ಲೆಗಳಿಗೆ ಭಯಂಕರ ಮಳೆಯ ಹಿನ್ನಲೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಬೆಂಗಳೂರು.23.ಜುಲೈ.26: ರಾಜ್ಯದ 20 ಜಿಲ್ಲೆಗಳಿಗೆ ಆರ್ಭಟ ಮುಂದುವರಿದಿದೆ. ನಾಳೆ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ನಾಳೆ ಹಲವು ಜಿಲ್ಲೆಗಳಿಗೆ ಭಯಂಕರ ಮಳೆಯ ಹಿನ್ನಲೆ ಎಚ್ಚರಿಕೆ ನೀಡಲಾಗಿದೆ.

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 23 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸಹ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5 ಮಿ.ಮೀ ನಿಂದ 115.4 ಮಿ.ಮೀ ವರೆಗೆ ಭಾರಿ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು (ನಗರ ಮತ್ತು ಗ್ರಾಮೀಣ), ಮೈಸೂರು, ಮಂಡ್ಯ, ಹಾಸನ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆ ಮಳೆಯಾಗುವ ನಿರೀಕ್ಷೆಯಿದೆ.

Author

ಪ್ರಮುಖ ಸುದ್ದಿ

Stock market

Astrology