Home » ಲೈವ್ ನ್ಯೂಸ್ » ಕೃಷಿ ಪಂಡಿತ, ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೃಷಿ ಪಂಡಿತ, ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ,.28.ಜುಲೈ 26: ಕೃಷಿ ಇಲಾಖೆದಿಂದ 2026-27ನೇ ಸಾಲಿನ ರೈತರಿಗೆ ಕೃಷಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

     ಕೃಷಿ ಪಂಡಿತ ಪ್ರಶಸ್ತಿ ಕೃಷಿಯಲ್ಲಿ ಸಾಧನೆ ಮಾಡಿದ ಅರ್ಹ ರೈತರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಕೃಷಿಯಲ್ಲಿ ರೈತ ಮಹಿಳೆಯ ಪ್ರೋತ್ಸಾಹಿಸುವ ಇತರೆ ಮಹಿಳೆಯ ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಸಲ್ಲಿಸಲು ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.

ಭಾಗವಹಿಸುವವರ ಸಂಶೋಧನೆ, ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೆ ಅವರ ಸಂಶೋಧನೆಗಳು, ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಕೃಷಿ ಪ್ರಶಸ್ತಿ ಕೃಷಿಯಲ್ಲಿ ಸಾಧನೆ ಮಾಡಿದ  ಅರ್ಹ ರೈತರಿಗೆ ಕೃಷಿ ಪ್ರಶಸ್ತಿ ನೀಡಲಿದೆ.

ಕೃಷಿ ಪ್ರಶಸ್ತಿಗೆ ಜಿಲ್ಲೆಯ ಪ್ರಮುಖ ಬೆಳೆಯಾದ ಸೋಯಾ ಅವರೆ (ಮಳೆಯಾಶ್ರಿತ) ಬೆಳೆಗೆ ರೈತ ಬಾಂಧವರು ಹೆಸರನ್ನು ನೊಂದಾಯಿಸಬೇಕು, ಭಾಗವಹಿಸಲು ಇಚ್ಛಿಸುವ ರೈತರು ಕನಿಷ್ಟ ಒಂದು ಎಕರೆ ಜಮೀನನ್ನು ಹೊಂದಿರಬೇಕು, ಕೃಷಿ ಪ್ರಶಸ್ತಿಗೆ 2026ರ ಆಗಸ್ಟ್ 31ರ ಒಳಗೆ ಅರ್ಜಿಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology