Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ.

ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ.

Facebook
X
WhatsApp
Telegram

ಚಿತ್ರದುರ್ಗ.29.ಜುಲೈ.26: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಎರಡು ದಶಕದಿಂದ ಸತತ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವರಿಗೆ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಘಟಕದ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೈಗೆ ಕಪ್ಪುಪಟ್ಟಿ ಧರಿಸಿ ತರಗತಿ ಪ್ರವೇಶಿಸುವ ಮೂಲಕ ಪ್ರತಿಭಟನೆ ಮಾಡಿದರು.

ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿ ಗಳು, ‘ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರನ್ನು ಶೀಘ್ರ ಕಾಯಂಗೊಳಿಸಬೇಕು. ಜತೆಗೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.

‘ಸೇವೆ ಕಾಯಂಗೊಳಿಸದ ಕಾರಣ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ. ಜತೆಗೆ ಶೈಕ್ಷಣಿಕ ಹಿತಾಸಕ್ತಿಗೆ ದಕ್ಕೆಯಾಗುತ್ತಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೂಡಲೇ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಗೋಪಿ ರಂಗಸ್ವಾಮಿ, ಜಿಲ್ಲಾ ಸಂಚಾಲಕ ಕನಕರಾಜ್‌, ಸಂಜಯ್‌, ಸಾಮಾಜಿಕ ಜಾಲತಾಣ ಪ್ರಮುಖ ಆದರ್ಶ್‌, ಮಿಥುನ್‌, ಸುದರ್ಶನ್‌, ಸುದೀಪ್‌, ಪವಿತ್ರಾ ಇದ್ದರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology