ಬೀದರ,03.ಜುಲೈ.26 : ಬೀದರ ಜಿಲ್ಲೆಯಲ್ಲಿ 2026-27ನೇ ಸಾಲಿನ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಕಾನೂನು ಪದವೀಧರರ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ತರಬೇತಿಯ ಅವಧಿಯು 4 ವರ್ಷಗಳಿದ್ದು, ತರಬೇತಿ ಅವಧಿ ಮಾಸಿಕ 4,000 ರೂ.ಗಳ ತರಬೇತಿ ಭತ್ಯೆ ನೀಡಲಿದೆ. ಅರ್ಜಿಗಳನ್ನು ಸಲ್ಲಿಸಬಯಸುವವರು ಈ ಕೆಳಕಂಡ ಷರತ್ತುಗಳನ್ನು ಪೂರೈಸಿರಬೇಕು.
ಷರತ್ತುಗಳು : ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿಗೆ ಸೇರಿದವರಾಗಿರಬೇಕು. ಬೀದರ ಜಿಲ್ಲೆಯ ನಿವಾಸಿಯಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1 ರಡಿಯಲ್ಲಿ ಬರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆದಾಯ 3.50 ಲಕ್ಷ ರೂ.ಗಳ ಮತ್ತು ಪ್ರವರ್ಗ-2ಎ, 3ಎ ಮತ್ತು 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಆದಾಯ 2.50 ಲಕ್ಷ ರೂ.ಗಳ ಮಿತಿ ಒಳಗಿರಬೇಕು. ಅಭ್ಯರ್ಥಿಯು ಬಾರಕೌನ್ಸಿಲ್ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷ ಒಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕಕ್ಕೆ ಪ್ರವರ್ಗ 2ಎ, 3ಎ, ಮತ್ತು 3ಬಿಯ ಅಭ್ಯರ್ಥಿಯ ವಯಸ್ಸು 38ಕ್ಕೆ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ 40 ವರ್ಷ ಒಳಗಿರಬೇಕು, ಅರ್ಜಿ ಸ್ವೀಕರಿಸಲು ನಿಗಡಿಪಡಿಸಿರುವ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯು 3 ವರ್ಷಗಳ ಅವಧಿ ಒಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ದಾಖಲಾತಿಗಳು : ಎಸ್.ಎಸ್.ಎಲ್.ಸಿ ದೃಢೀಕೃತ ಅಂಕಪಟ್ಟಿ, ಕಾನೂನು ಪದವಿ ಪರೀಕ್ಷೆಯ ಎಲ್ಲಾ ವರ್ಷಗಳ ಧೃಡೀಕೃತ ಅಂಕ ಪಟ್ಟಿ. ತಹಶೀಲ್ದಾರರಿಂದ ನೀಡಲ್ಪಟ್ಟಜಾತಿ/ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ. ಬಾರಕೌನ್ಸಿಲ್ನಲ್ಲಿ ಹೆಸರನ್ನು ನೋಂದಾಯಿಸಿದ ಪ್ರಮಾಣ ಪತ್ರ. ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಪಡೆದು ದಾಖಲೆಗಳೊಂದಿಗೆ 2026ರ ಆಗಸ್ಟ್ 29ರ ಸಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕು. ಅಪೂರ್ಣವಾದ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಬೀದರ ನಾವದಗೇರಿ ಜನವಾಡ ರಸ್ತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ.08482233148, ಇಮೇಲ್ dobcmbidar@gmail.comಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Any questions related to ಕಾನೂನು ತರಬೇತಿ ಭತ್ಯೆಗೆ ಅರ್ಜಿ ಆಹ್ವಾನ.?