Home » ಲೈವ್ ನ್ಯೂಸ್ » ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ.

ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ.

Facebook
X
WhatsApp
Telegram

ಕೊಪ್ಪಳ.20.ಆಗಸ್ಟ್.26: ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ 2026-27ನೇ ಸಾಲಿನ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಹ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿ ಹಾಗೂ ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣಗಳ ಬಳಕೆ ಮತ್ತು ಅಭಿವೃದ್ಧಿ, ನೀರಿನ ಸಮರ್ಥ ಬಳಕೆ ಸೇರಿದಂತೆ ವಿವಿಧ ಕೃಷಿ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಜಿಲ್ಲೆಯ ರೈತರು ಹಾಗೂ ರೈತ ಮಹಿಳೆಯರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಶಸ್ತಿಗೆ ಸಂಬoಧಿಸಿದ ಅರ್ಜಿ ನಮೂನೆಗಳು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ಆಸಕ್ತ ರೈತರು ಅರ್ಜಿಯನ್ನು ಪಡೆದು, ಅಗತ್ಯ ಮಾಹಿತಿಯೊಂದಿಗೆ ಭರ್ತಿ ಮಾಡಿ ಇದೆ ಆಗಸ್ಟ್ 31 ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ಕೆಲಸದ ವೇಳೆಯಲ್ಲಿ ಸಮೀಪದ ರೈತ ಸಂಪರ್ಕ ಕೇಂದ್ರದ ಮುಖ್ಯಸ್ಥರು ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ಹಾಗೂ ಆತ್ಮ ವಿಭಾಗದ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology