Home » ಲೈವ್ ನ್ಯೂಸ್ » 428 ಸರ್ಕಾರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಿಲ್ಲ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ

428 ಸರ್ಕಾರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಿಲ್ಲ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ

Facebook
X
WhatsApp
Telegram

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 440 ಪೈಕಿ, 428 ಕಾಲೇಜುಗಳಲ್ಲಿ ಪ್ರಾಂಶುಪಾಲರೇ ಇಲ್ಲ. ಮೂಲಸೌಕರ್ಯಗಳ ಕೊರತೆ ಇದ್ದು, ಅದನ್ನು ನಿವಾರಿಸಲು ಆದ್ಯತೆ ನೀಡಲಾಗಿದೆ. ಹೊಸ ಕಾಲೇಜು ತೆರೆಯುವ ಆಲೋಚನೆ ಇಲ್ಲ’
ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಕೆ. ಅಬ್ದುಲ್ ಜಬ್ಬಾ‌ರ್ ಅವರ ಗಮನಸೆಳೆಯುವ ಸೂಚನೆಗೆ ಅವರು ಉತ್ತರ ನೀಡಿದರು.

‘ಸರ್ಕಾರಿ ಕಾಲೇಜುಗಳಲ್ಲಿ ಹಲವು ಸಮಸ್ಯೆಗಳಿವೆ. ಅವುಗಳನ್ನೆಲ್ಲ ಪರಿಹರಿಸಿ, ಬಲವರ್ಧನೆ ಮಾಡುವ ಉದ್ದೇಶವಿದೆ’ ಎಂದರು.

‘ದಾವಣಗೆರೆ ದಕ್ಷಿಣ ಅತಿವೇಗವಾಗಿ ಬೆಳೆಯುತ್ತಿರುವ ನಗರ ಹಾಗೂ ಗ್ರಾಮೀಣ ಪ್ರದೇಶವಾಗಿದ್ದು, ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಆದ್ದರಿಂದ ಹೊಸ ಪ್ರಥಮ ದರ್ಜೆ ಕಾಲೇಜನ್ನು ಸರ್ಕಾರ ತೆರೆಯಬೇಕು’ ಎಂದು ಅಬ್ದುಲ್ ಜಬ್ಬಾರ್ ಒತ್ತಾಯಿಸಿದರು.

ದಾವಣಗೆರೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಹತ್ತು ಕಾಲೇಜುಗಳಿವೆ. ನಿಮ್ಮ ಬೇಡಿಕೆಯನ್ನು ಒಪ್ಪುತ್ತೇನೆ, ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುತ್ತದೆ. ಅಲ್ಪಸಂಖ್ಯಾತ ಇಲಾಖೆಯಿಂದ ಕಾಲೇಜುಗಳನ್ನು ತೆರೆಯಲು ಯೋಚಿಸಲಾಗುತ್ತಿದೆ. ಆ ಇಲಾಖೆಯ ಸಚಿವರೊಂದಿಗೆ ಮಾತನಾಡಿ, ಪರಿಗಣಿಸುವಂತೆ ಅವರನ್ನು ಕೇಳೋಣ’ ಎಂದು ರಾಯರಡ್ಡಿ ವ್ಯಕ್ತಪಡಿಸಿದರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology