Home » ಲೈವ್ ನ್ಯೂಸ್ » ಸಾರ್ವಜನಿಕರ ಸಮ್ಮುಖದಲ್ಲಿ ನಿಂದಿಸಿದರೆ ಮಾತ್ರ SC/ST ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾರ್ವಜನಿಕರ ಸಮ್ಮುಖದಲ್ಲಿ ನಿಂದಿಸಿದರೆ ಮಾತ್ರ SC/ST ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Facebook
X
WhatsApp
Telegram

ಹೊಸ ದೆಹಲಿ, 22.ಆಗಸ್ಟ್.26: ಇಂದು ಸರ್ವೋಚ್ಚ್ಯ ನ್ಯಾಯಾಲಯದ ಸಾರ್ವಜನಿಕರ ಮಹತ್ವದ ತೀರ್ಪು ಏನು ಅಂದ್ರೆ ಸಮ್ಮುಖದಲ್ಲಿ ನಿಂದಿಸಿದರೆ ಮಾತ್ರ SC/ST ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗಲಿದೆ ಎಂದು ಜಾತಿ ನಿಂದನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಾಗಿದೆ.

ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆಯ ಕಾಯ್ದೆಯ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ವಿಕ್ರಮನಾಥ್, ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ಪೀಠವು ಉತ್ತರ ಪ್ರದೇಶದ ಶಾಲೆಯೊಂದರ ವ್ಯವಸ್ಥಾಪಕರ ವಿರುದ್ಧ ಎಸ್ಸಿ, ಎಸ್ಟಿ ದವರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ. ಇದೇ ವೇಳೆ ಜಾತಿನಿಂದನೆ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಕಾಯ್ದೆಯ ಪ್ರಕಾರ ನಿಂದನೆ ನಡೆದ ಸ್ಥಳವು ಸಾರ್ವಜನಿಕ ವೀಕ್ಷಣೆಯ ವ್ಯಾಪ್ತಿಯಲ್ಲಿರಬೇಕು. ಅಂದರೆ ಆರೋಪಿಯು ಸಂತ್ರಸ್ತರಿಗೆ ನಿಂದಿಸುವುದನ್ನು ಸಾರ್ವಜನಿಕರು ನೋಡಲು ಅಥವಾ ನಿಂದನೆಯ ಮಾತುಗಳನ್ನು ಕೇಳಲು ಸಾಧ್ಯವಾಗುವಂತಹ ತೆರೆದ ಸ್ಥಳವಾಗಿರಬೇಕು. ಒಂದು ವೇಳೆ ಘಟನೆಯು ಸಾರ್ವಜನಿಕರು ಇಲ್ಲದ ನಾಲ್ಕು ಗೋಡೆಗಳ ಮಧ್ಯೆ ನಡೆದರೆ ಅದನ್ನು ಸಾರ್ವಜನಿಕ ವೀಕ್ಷಣೆಯ ಸ್ಥಳದಲ್ಲಿ ನಡೆದಿದೆ ಎಂದು ಹೇಳಲಾಗದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಶಾಲೆಯ ವ್ಯವಸ್ಥಾಪಕರು ನಿರ್ದಿಷ್ಟವಾಗಿ ಯಾವುದೇ ಜಾತಿ ನಿಂದನೆಯ ಮಾತುಗಳನ್ನು ಆಡಿದ್ದಾರೆ ಎಂದು ಎಫ್‌ಐಆರ್ ನಲ್ಲಿ ಉಲ್ಲೇಖಿಸಿಲ್ಲ. ಅಲ್ಲದೆ, ಪ್ರಾಸಿಕ್ಯೂಷನ್ ಒದಗಿಸಿದ ದಾಖಲೆಗಳು ಉಭಯ ಬಣಗಳ ನಡುವಿನ ಜಗಳ ಮತ್ತು ಗಲಾಟೆಯನ್ನು ಮಾತ್ರ ತೋರಿಸುತ್ತವೆಯೇ ಹೊರತು ಶಾಲೆಯ ವ್ಯವಸ್ಥಾಪಕರು ಯಾವುದೇ ನಿರ್ದಿಷ್ಟ ಜಾತಿ ನಿಂದನೆಯ ಮಾತುಗಳ ಆಡಿದ್ದಾರೆ ಎಂಬುದನ್ನು ದೃಢಪಡಿಸುವುದಿಲ್ಲ.

ಈ ವಾದ ವಿವಾದ ನಾಲ್ಕು ಗೋಡೆಗಳ ಮಧ್ಯೆ ಸಾರ್ವಜನಿಕರಾರು ಇಲ್ಲದ ಸ್ಥಳದಲ್ಲಿ ನಡೆದಿದೆ. ಹೀಗಾಗಿ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಈ ಪ್ರಕರಣದಲ್ಲಿ ಅನ್ವಯವಾಗುವುದಿಲ್ಲ. ಶಾಲಾ ವ್ಯವಸ್ಥಾಪಕರ ವಿರುದ್ಧ ಈ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸುತ್ತೇವೆ. ಆದರೆ ಅವರ ವಿರುದ್ಧ ದಾಖಲಾಗಿರುವ ಇತರೆ ಆರೋಪಗಳಿಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆ ಮುಂದುವರೆಯಲಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology