ಬೆಂಗಳೂರು.28.ಆಗಸ್ಟ್.26: ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1,505 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆ ಹೆಸರು: ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಇತ್ಯಾದಿ
ಒಟ್ಟು ಹುದ್ದೆ: 1,505
ಉದ್ಯೋಗ ಸ್ಥಳ: ರಾಜ್ಯಾದ್ಯಂತ 1,205 ಮಹಿಳಾ ಪ್ರಾಥಮಿಕ ಆರೋಗ್ಯ ಸಂರಕ್ಷಾಧಿಕಾರಿಗಳು ಹಾಗೂ 300 ಹೆಲ್ತ್ ಇನ್ಸ್ ಪೆಕ್ಟಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಯಾವುದೇ ಮಂಡಳಿಗಳಲ್ಲಿ ಬಿಎಸ್ಸಿ ನರ್ಸಿಂಗ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಪ್ರಾಯೋಗಿಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಲಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 76 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://cetonline.karnataka.gov.in/kea/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿಕೊಂಡ ಬಳಿಕ ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.





Any questions related to ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ!?