09/06/2025 12:38 AM

Translate Language

Home » ಲೈವ್ ನ್ಯೂಸ್ » ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಪ್ರಮಾಣ ವಚನ!

ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಪ್ರಮಾಣ ವಚನ!

Facebook
X
WhatsApp
Telegram

07 ಡಿಸೆಂಬರ್ 24 ಮುಂಬೈ:-ಮಹಾರಾಷ್ಟ್ರ, ವಿಧಾನಸಭೆಯ ವಿಶೇಷ ಅಧಿವೇಶನ ಇಂದು ಬೆಳಗ್ಗೆ ಮುಂಬೈನಲ್ಲಿ ಆರಂಭವಾಗಿದೆ. ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಳಂಬ್ಕರ್ ಕಲಾಪಕ್ಕೆ ಚಾಲನೆ ನೀಡಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ರಾಜ್ಯ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.


ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ಅವರು ವಿಧಾನಸಭೆಯ ಕಲಾಪವನ್ನು ನೋಡಿಕೊಳ್ಳುತ್ತಿದ್ದಾರೆ ಮತ್ತು ಹೊಸದಾಗಿ ಚುನಾಯಿತರಾದ 288 ಶಾಸಕರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸುತ್ತಿದ್ದಾರೆ.

ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಡಿಸೆಂಬರ್ 9 ರಂದು ವಿಧಾನಸಭೆಯ ಸ್ಪೀಕರ್ ಆಯ್ಕೆಗೆ ಚುನಾವಣೆ ನಿಗದಿಯಾಗಿದೆ.

ಇದರ ಬೆನ್ನಲ್ಲೇ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!