Home » ಲೈವ್ ನ್ಯೂಸ್ » ಅತಿಥಿ’ಗಳಿಗೆ ಗೌರವ ಸಂಭಾವನೆಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ!

ಅತಿಥಿ’ಗಳಿಗೆ ಗೌರವ ಸಂಭಾವನೆಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ!

ವಡಗೆರಾ.04.ಸೆಪ್ಟೆಂಬರ್.26: ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 2026-27 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಕೂಡಲೇ ಬಿಡುಗಡೆ ಮಾಡಲು ವಡಗೇರಾ ತಾಲ್ಲೂಕು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ವಿರೇಶ ಕೊಂಕಲ್ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತಿಥಿ ಶಿಕ್ಷಕರು ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಸರಿದೂಗಿಸುತ್ತಿದ್ದಾರೆ. ಪ್ರಾಥಮಿಕ ಶಾಲೆಯಲ್ಲಿ ₹12 ಸಾವಿರ ಹಾಗೂ ಪ್ರೌಢಶಾಲೆಯಲ್ಲಿ ₹12,500ಗಳ ಅತಿ ಕಡಿಮೆ ಗೌರವ ಸಂಭಾವನೆಯಲ್ಲಿ ದುಡಿಯುತಿದ್ದಾರೆ. ಆದರೆ, ಕಳೆದ ಮೂರು ತಿಂಗಳಿನಿಂದ ಈ ವೇತನವೂ ಸಕಾಲಕ್ಕೆ ಪಾವತಿಯಾಗದೇ ಇರುವದರಿಂದ ಕುಟುಂಬಗಳ ನಿರ್ವಹಣೆಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತಿಥಿ ಶಿಕ್ಷಕರು ದಿನವೊಂದಕ್ಕೆ ₹400 ರೂಪಾಯಿ ಪಡೆದು ವಿದ್ಯಾರ್ಥಿಗಳಿಗೆ ಪಾಠ ಮಾಡುವ ಪರಿಸ್ಥಿತಿ ಉಂಟಗಿದೆ. ಇದು ರಾಜ್ಯ ಸರ್ಕಾರವು ವಿದ್ಯಾವಂತರಿಗೆ ಮಾಡುತ್ತಿರುವ ಶೋಷಣೆಯಾಗಿದೆ ಎಂದಿದ್ದಾರೆ.

ಕೂಡಲೇ ವೇತನ ಬಿಡುಗಡೆ ಮಾಡಿ ಅತಿಥಿ ಶಿಕ್ಷಕರಿಗೆ ಅನುಕೂಲ ಮಾಡಿಕೊಡಬೇಕು. ಒಂದು ವೇಳೆ ವಿಳಂಬ ಮಾಡಿದಲ್ಲಿ ರಾಜ್ಯದಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಿರಂತರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology