ಕೊಪ್ಪಳ.05.ಸೆಪ್ಟೆಂಬರ್.26: 2026-27ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೊಪ್ಪಳದ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೃಷಿ ಇಲಾಖೆಯ ಕೆ-ಕಿಸಾನ್ (K-KISAN) ಪೋರ್ಟಲ್‌ನಲ್ಲಿ ಸಿಟಿಜನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ರೈತ ಸಂಪರ್ಕ ಕೇಂದ್ರಗಳು ಹಾಗೂ ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಆಗಸ್ಟ್ 31ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆ ಅತ್ಯಂತ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ಜಿಲ್ಲೆಯ ರೈತ ಬಾಂಧವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳುವಂತೆ ಈ ಮೂಲಕ ಕೃಷಿ ಇಲಾಖೆ ಮನವಿ ಮಾಡಿದೆ. ಅರ್ಜಿ ಸಲ್ಲಿಸಲು ಆಸಕ್ತ ರೈತರು ಸೆಪ್ಟೆಂಬರ್ 30 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬAಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರವನ್ನು ಸಂಪರ್ಕಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.






Any questions related to ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ?