Home » ಲೈವ್ ನ್ಯೂಸ್ » ಒಕ್ಕಲಿಗ ಅಭಿವೃದ್ದಿ ನಿಗಮದಿಂದ ವಿವಿಧ ಸೌಲಭ್ಯಕ್ಕ್ಕೆ ಅರ್ಜಿ ಆಹ್ವಾನ

ಒಕ್ಕಲಿಗ ಅಭಿವೃದ್ದಿ ನಿಗಮದಿಂದ ವಿವಿಧ ಸೌಲಭ್ಯಕ್ಕ್ಕೆ ಅರ್ಜಿ ಆಹ್ವಾನ

ರಾಯಚೂರು.18.ಸೆಪ್ಟಂಬರ್.26: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ 2026-27ನೇ ಸಾಲಿಗೆ ವಿವಿಧ ಸೌಲಭ್ಯಕ್ಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ‍್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದಡಿ ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1ರ (ಎ) ಯಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪಒಕ್ಕಲಿಗ, ಹಳ್ಳಿಕಾರ್ಬಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾರ್ಬ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ / ಗೌಡ ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ / ಉತ್ತಮ ಕೊಳಗ ಸಮುದಾಯಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ.


ನಿಗಮವು ಅನುಷ್ಟಾನಗೊಳಿಸುವ ಯೋಜನೆಗಳಲ್ಲಿ ಮಾನ್ಯ ಶಾಸಕರು / ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ರವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಸರ್ಕಾರದ ವಿವೇಚನಾ ಕೋಟಾ / ನಿಗಮದ ಅಧ್ಯಕ್ಷರು / ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬೇಕು.


ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.


2024-25 ಮತ್ತು 2025-26ನೇ ಸಾಲಿನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಗಳಲ್ಲಿ ಕಾರಣಾಂತರಗಳಿoದ ಆಯ್ಕೆಯಾಗದೇ ಇರುವ ಅರ್ಹ ಅರ್ಜಿದಾರರು 2026-27ನೇ ಸಾಲಿನ ಪ್ರಕಟಣೆಗೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕವಿರುವುದಿಲ್ಲ. ಕಳೆದ ಸಾಲುಗಳಲ್ಲಿ ಸಲ್ಲಿಸಿದ ಅರ್ಜಿಯನ್ನೆ ಆಯ್ಕೆ ಸಮಿತಿಗಳ ಮುಂದೆ ಆಯ್ಕೆಗೆ ಮತ್ತೊಮ್ಮೆ ಮಂಡಿಸಲಾಗುವುದು.


ಆಸಕ್ತರು ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಗ್ರಾಮ ಒನ್ / ಬೆಂಗಳೂರು ಒನ್ / ಕರ್ನಾಟಕ ಒನ್‌ಗಳ ಮೂಲಕ ಸೆಪ್ಟಂಬರ್ 30ರೊಳಗಾಗಿ ವೆಬ್‌ಸೈಟ್ ವಿಳಾಸ: hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom ನಲ್ಲಿ ಸಲ್ಲಿಸುವುದು.


ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲತಾಣ hಣಣಠಿs://ಞvಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ನಿಗಮದ ದೂರವಾಣಿ ಸಂಖ್ಯೆ: 080-29904350, 29904268ಗೆ ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08532-250440ಗೆ ಕಚೇರಿಯ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology