Home » ಲೈವ್ ನ್ಯೂಸ್ » ಕಲಾವಿದರ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ: ಸೆ. 30 ಕೊನೆಯ ದಿನಾಂಕ!

ಕಲಾವಿದರ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ: ಸೆ. 30 ಕೊನೆಯ ದಿನಾಂಕ!

ಕೊಪ್ಪಳ.23.ಸೆಪ್ಟೆಂಬರ್.26: ಕೊಪ್ಪಳ ಜಿಲ್ಲೆಯ ಅರ್ಹ ಕಲಾವಿದರಿಗೆ ‘ಕಲಾವಿದರ ದತ್ತಾಂಶ ಯೋಜನೆ’ಯಡಿ ಗುರುತಿನ ಚೀಟಿ ವಿತರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ.


ಸಾಹಿತ್ಯ, ರಂಗಭೂಮಿ, ಜಾನಪದ, ಸಂಗೀತ, ನೃತ್ಯ, ಚಿತ್ರಕಲೆ ಹಾಗೂ ಇತ್ಯಾದಿ ಕಲಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜಿಲ್ಲೆಯ ಅರ್ಹ ಕಲಾವಿದರು ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಇದೇ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದ್ದು, ಆಸಕ್ತ ಕಲಾವಿದರು ನಿಗದಿತ ಅವಧಿಯೊಳಗೆ ಅರ್ಜಿಗಳನ್ನು ‘ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ’ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಈ ಕಚೇರಿಯನ್ನು ಸಂಪರ್ಕಿಸಬಹುದೆAದು ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology