Home » ಲೈವ್ ನ್ಯೂಸ್ » ಕೌಶಲ್ಯಾಭಿವೃದ್ಧಿ ತರಬೇತಿ: ನೋಂದಣಿಗೆ ಸೂಚನೆ.

ಕೌಶಲ್ಯಾಭಿವೃದ್ಧಿ ತರಬೇತಿ: ನೋಂದಣಿಗೆ ಸೂಚನೆ.

ಕೊಪ್ಪಳ23.ಸೆಪ್ಟೆಂಬರ್ 26: ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸುವ ಆಸಕ್ತರಿಗಾಗಿ ಗಂಗಾವತಿಯಲ್ಲಿ ಫ್ಯಾಶನ್ ಡಿಸೈನಿಂಗ್ & ಟೈಲರಿಂಗ್ ಬಗ್ಗೆ 24 ದಿನಗಳ ಕೌಶಲ್ಯಾಧಾರಿತ ತರಬೇತಿಯನ್ನು ಹಮ್ಮಿಕೊಳ್ಳಲಿದ್ದು, ಜಿಲ್ಲೆಯ ಯಾವುದೇ ತಾಲೂಕಿನ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.


ಕಾರ್ಯಕ್ರಮದಲ್ಲಿ ಆಯಾ ವೃತ್ತಿಗಳಲ್ಲಿ ಕೌಶಲ್ಯದ ಪ್ರಾಯೋಗಿಕ ಹಾಗೂ ಸಿದ್ಧಾಂತದೊAದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವುದು ಮತ್ತು ಸಂಬAಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ / ಮಾಹಿತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಅರ್ಹರಿಗೆ ಸರ್ಕಾರಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಸಾಲ ಸೌಲಭ್ಯಕ್ಕಾಗಿ ಶಿಫಾರಸ್ಸು ಮಾಡಲಾಗುವುದು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತ 18 ರಿಂದ 35 ವರ್ಷದೊಳಗಿನ, ಕನಿಷ್ಠ ಎಸ್‌ಎಸ್‌ಎಲ್‌ಸಿ ಪಾಸ್ ಆದ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಿಕೊಳ್ಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ನಗರ ಸಭೆ ಎದುರು, ಕೊಪ್ಪಳ – 583231ಇಲ್ಲಿಗೆ ಸೆಪ್ಟೆಂಬರ್ 28 ರೊಳಗೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ: 7204016012 ಇಲ್ಲಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ್ಳಬಹುದಾಗಿದೆ ಎಂದು ಸಿಡಕ್ ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology