ಕೊಪ್ಪಳ.23.ಸೆಪ್ಟೆಂಬರ್.26: ಕೊಪ್ಪಳ ಜಿಲ್ಲೆಯ ಕೊಪ್ಪಳ ಮತ್ತು ಗಂಗಾವತಿ ನಗರಸಭೆಗಳಲ್ಲಿ ಖಾಲಿ ಇರುವ ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೊಪ್ಪಳ ನಗರಸಭೆಯಲ್ಲಿ ನೇರಪಾವತಿ ಪೌರಕಾರ್ಮಿಕರು 15, ಮ್ಯಾನ್ಯುವಲ್ ಸ್ಕಾö್ಯವೆಂಜರ್ಸ್ ಅಧಿನಿಯಮದಡಿ (ಶೇ. 10 ರಷ್ಟು ಕಾಯ್ದಿರಿಸಿದ ಖಾಲಿ ಹುದ್ದೆಗಳು) 2 ಹುದ್ದೆಗಳು ಸೇರಿ ಒಟ್ಟು 17 ಹುದ್ದೆಗಳು ಹಾಗೂ ಗಂಗಾವತಿ ನಗರಸಭೆಯಲ್ಲಿ ನೇರಪಾವತಿ ಪೌರಕಾರ್ಮಿಕರು 27 ಹಾಗೂ ಮ್ಯಾನ್ಯುವಲ್ ಸ್ಕಾö್ಯವೆಂಜರ್ಸ್ ಅಧಿನಿಯಮದಡಿ (ಶೇ. 10 ರಷ್ಟು ಕಾಯ್ದಿರಿಸಿದ ಖಾಲಿ ಹುದ್ದೆಗಳು) 4 ಹುದ್ದೆಗಳು ಸೇರಿ ಒಟ್ಟು 31 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಕನಿಷ್ಠ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಅಭ್ಯರ್ಥಿಗೆ ಕನ್ನಡ ಭಾಷೆಯಲ್ಲಿ ಮಾತನಾಡಲು ಬರಬೇಕು. ಹಾಗೂ ಅಭ್ಯರ್ಥಿಗಳಿಗೆ ದಿನಾಂಕ:21-09-2026 ರ ವೇಳೆಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ ವಯೋಮಿತಿ 50 ವರ್ಷ ಮೀರಿರಬಾರದು.
ಅರ್ಜಿ ಶುಲ್ಕವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ.100 ಹಾಗೂ ಸಾಮಾನ್ಯ, 2ಎ, 2ಬಿ, 3ಎ ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ.200 ನಂತೆ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಸಲ್ಲಿಸಬೇಕು.
ಕೊಪ್ಪಳ ನಗರಸಭೆಗೆ ಅರ್ಜಿ ಸಲ್ಲಿಸುವವರು ಕೊಪ್ಪಳ ನಗರಸಭೆಯ ಪೌರಾಯುಕ್ತರಿಗೆ ಹಾಗೂ ಗಂಗಾವತಿ ನಗರಸಭೆಗೆ ಅರ್ಜಿ ಸಲ್ಲಿಸುವವರು ಗಂಗಾವತಿ ಪೌರಾಯುಕ್ತರಿಗೆ ಅವರ ಹೆಸರಿನಲ್ಲಿ ಡಿಡಿ ತೆಗೆದು ಅರ್ಜಿಯೊಂದಿಗೆ ಲಗತ್ತಿಸಬೇಕು. ಶುಲ್ಕ ಪಾವತಿಸದ ಹಾಗೂ ಅಪೂರ್ಣ ದಾಖಲೆ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 22 ವರೆಗೆ ಅವಕಾಶವಿದ್ದು, ಅರ್ಜಿ ನಮೂನೆಯನ್ನು ಕೊಪ್ಪಳ ಅಥವಾ ಗಂಗಾವತಿ ನಗರಸಭೆ ಕಾರ್ಯಾಲಯದಲ್ಲಿ ಪಡೆದುಕೊಂಡು ಅಧಿಸೂಚನೆಯಲ್ಲಿ ತಿಳಿಸಲಾದ ಕೊನೆಯ ದಿನಾಂಕದೊಳಗಾಗಿ ಅಗತ್ಯ ಶಾಲಾ ಹಾಗೂ ಇತರ ಪ್ರಮಾಣಪತ್ರಗಳೊಂದಿಗೆ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಅಥವಾ ಗಂಗಾವತಿ ನಗರಸಭೆ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Any questions related to ಕೊಪ್ಪಳ ಮತ್ತು ಗಂಗಾವತಿ ನಗರಸಭೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ?