ಬೆಂಗಳೂರು.26.ಸೆಪ್ಟೆಂಬರ್.26:ಕರ್ಣಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ಶಿಕ್ಷಕರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದೆ.
ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?
ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಸಾಮಾನ್ಯ ಶಿಕ್ಷಕ (ಪಿಎಸ್‌ಟಿ 1 ರಿಂದ 5ನೇ ತರಗತಿ), ಪಿ.ಇ ಗ್ರೇಡ್-2 (1 ರಿಂದ 8ನೇ ತರಗತಿ), ಜಿಪಿಟಿ (6 ರಿಂದ 8ನೇ ತರಗತಿ), ಸಿಎಸ್‌ಟಿ (1 ರಿಂದ 8ನೇ ತರಗತಿ) ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಸಹಶಿಕ್ಷಕರ ವೃಂದ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಹೊಸ ದಿನಾಂಕಗಳು:
ಈಗಾಗಲೇ ಜಿಲ್ಲಾವಾರು ಅಧಿಸೂಚನೆ ಹೊರಡಿಸಿದ್ದ ಶಿಕ್ಷಣ ಇಲಾಖೆಯು, ಈ ಹಿಂದೆ ಪ್ರಕಟಿಸಿದ್ದ ಪರೀಕ್ಷೆಗಳನ್ನು ಮುಂದೂಡಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅ.26 ರವರೆಗೆ ಅವಧಿ ವಿಸ್ತರಿಸಲಾಗಿದ್ದು, ಪಾವತಿಸಿರುವ ಅರ್ಜಿ ಶುಲ್ಕವನ್ನು ಖಚಿತಪಡಿಸಿಕೊಳ್ಳಲು ಅ. 28 ರವರೆಗೆ ಅವಕಾಶ ಕಲ್ಪಿಸಲಾಗಿದೆ.ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ನಿಖರವಾದ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.





Any questions related to ಶಿಕ್ಷಕರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದೆ.?