ಗುಲಬರ್ಗಾ ವಿಶ್ವವಿದ್ಯಾಲಯ ಮುಖ್ಯ ಆವರಣ ಹಾಗೂ ಆಳಂದ ಸ್ನಾತಕೋತ್ತರ ಕೇಂದ್ರದಲ್ಲಿ ವಿವಿಧ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ 2026-27ನೇ ಸಾಲಿನ ಶೈಕ್ಷಣಿಕ ಸಾಲಿಗೆ ಯುಜಿಸಿ ನಿಯಮಾನುಸಾರ ಬೋಧನಾ ಕಾರ್ಯ ಅನುಗುಣವಾಗಿ ಪೂರ್ಣಕಾಲಿಕ/ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ (ಕಾರ್ಯಬಾಹುಳ್ಯಕ್ಕೆ ಅನುಗುಣವಾಗಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕುಲಸಚಿವ ಪ್ರೊ.ರಮೇಶ ಲಂಡನಕರ್ ತಿಳಿಸಿದ್ದಾರೆ.
ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಹುದ್ದೆಗಳು:
ಗುಲಬರ್ಗಾ ವಿಶ್ವವಿದ್ಯಾಲಯದ ಮುಖ್ಯ ಆವರಣ ಸ್ನಾತಕೋತ್ತರ ವಿಭಾಗಗಳಲ್ಲಿ ಖಾಲಿಯಿರುವ ಸಸ್ಯಶಾಸ್ತ್ರ, ಜೀವ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಪರಿಸರ ವಿಜ್ಞಾನ, ಜೈವಿಕ ತಂತ್ರಜ್ಞಾನ, ರಸಾಯನಶಾಸ್ತ್ರ (ಫಿಜಿಕಲ್ ಕೆಮಿಸ್ಟ್ರಿ, ಇನ್ ಆರ್ಗ್ಯಾನಿಕ್ ಕೆಮಿಸ್ಟ್ರಿ, ಆರ್ಗ್ಯಾನಿಕ್ ಕೆಮಿಸ್ಟ್ರಿ ಮತ್ತು ಅನಾಲೆಟಿಕಲ್ ಕೆಮಿಸ್ಟ್ರಿ, ಸೂಕ್ಷ್ಮಜೀವಶಾಸ್ತ್ರ, ಗಣಕ ವಿಜ್ಞಾನ (ಎಂಸಿಎ, ಎಂ.ಎಸ್ಸಿ. (ಗಣಕ ವಿಜ್ಞಾನ), ಸಂಖ್ಯಾಶಾಸ್ತ್ರ, ಭೌತಶಾಸ್ತ್ರ, ಗಣಿತಶಾಸ್ತ್ರ, ಅರ್ಥಶಾಸ್ತ್ರ, ಇತಿಹಾಸ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಸಮಾಜ ಕಾರ್ಯ, ಸಮಾಜಶಾಸ್ತ್ರ, ಮನೋವಿಜ್ಞಾನ, ರಾಜ್ಯಶಾಸ್ತ್ರ, ಕನ್ನಡ, ಪಾಲಿ ಮತ್ತು ಬೌದ್ಧ ಅಧ್ಯಯನ, ಇಂಗ್ಲಿಷ್, ಮರಾಠಿ, ಸಂಗೀತ, ಹಿಂದಿ, ಸಂಸ್ಕೃತ, ಉರ್ದು ಮತ್ತು ಪರ್ಷಿಯನ್, ದೃಶ್ಯಕಲಾ (ಎಂವಿಎ ಪೇಂಟಿಂಗ್, ಎಂವಿಎ ಸ್ಕಲ್ಚ್ಪರ್), ನಿರ್ವಹಣಾಶಾಸ್ತ್ರ, ವಾಣಿಜ್ಯ, ಎಂ.ಕಾಂ, ಶಿಕ್ಷಣ, ಕಾನೂನು ಉಪನ್ಯಾಸಕರ ಹುದ್ದೆಗಳಿಗೆ ಹಾಗೂ ಆಳಂದ ಸ್ನಾತಕೋತ್ತರ ಕೇಂದ್ರದಲ್ಲಿ ವಾಣಿಜ್ಯ, ಗಣಕ ವಿಜ್ಞಾನ, ಗಣಿತ, ಇಂಗ್ಲಿಷ್, ಕನ್ನಡ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅ.5 ಕೊನೆಯ ದಿನವಾಗಿದೆ. ಅ.17ರಿಂದ ಸಂದರ್ಶನ ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗೆ ವಿಶ್ವವಿದ್ಯಾಲಯದ www.gug.ac.in ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.






Any questions related to ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ!?