Home » ಲೈವ್ ನ್ಯೂಸ್ » ರಾಜ್ಯ ಸರ್ಕಾರ|2026-27ನೇ ಸಾಲಿನ (SSLC) ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ಎಚ್ಚರಿಕೆ ಸುದ್ಧಿ!

ರಾಜ್ಯ ಸರ್ಕಾರ|2026-27ನೇ ಸಾಲಿನ (SSLC) ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ಎಚ್ಚರಿಕೆ ಸುದ್ಧಿ!

ಬೆಂಗಳೂರು.04.ಸೇ: ರಾಜ್ಯ ಸರ್ಕಾರ 2026-27ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆಗೆ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದೆ. ಇದೀಗ ಶಾಲಾ ಶಿಕ್ಷಣ ಮೌಲ್ಯಮಾಪನ ಮಂಡಳಿಯು ಪರೀಕ್ಷಾ ಶುಲ್ಕದಲ್ಲಿ 5% ದರ ಜಾಸ್ತಿ ಮಾಡಲಾಗಿದೆ ಎಂದು ಘೋಷಣೆ ಮಾಡಲಾಗಿದೆ.

ಹೆಚ್ಚುವರಿ ಪರೀಕ್ಷಾ ಶುಲ್ಕ ಪಾವತಿಗೆ ಆದೇಶ:

ಈಗಾಗಲೇ 10ನೇ ತರಗತಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೂ ಹೆಚ್ಚುವರಿ ಶುಲ್ಕ ಪಾವತಿ ಮಾಡುವಂತೆ ಶಾಲಾ ಶಿಕ್ಷಣ ಮೌಲ್ಯಮಾಪನ ಮಂಡಳಿ ಆದೇಶದಲ್ಲಿ ತಿಳಿಸಿದೆ. ಪ್ರಥಮ ಬಾರಿಗೆ 10ನೇ ತರಗತಿ ಪರೀಕ್ಷೆ ಬರೆಯುವವರು, ಇದೀಗ ಪರೀಕ್ಷಾ ಶುಲ್ಕ 5% ಹೆಚ್ಚಳವಾಗಿದ್ದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ 710 ರುಪಾಯಿಗಳಿಂದ 746 ರುಪಾಯಿಗೆ ಏರಿಕೆಯಾಗಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ₹76 ಹೆಚ್ಚುವರಿ ಶುಲ್ಕ ಪಾವತಿಸಬೇಕಿದೆ.

ಎಸ್‌ಎಸ್‌ಎಲ್‌ಸಿ ನೋಂದಣಿ ಶುಲ್ಕವೂ ಏರಿಕೆ..!

ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಮಾತ್ರವಲ್ಲದೇ ಎಸ್‌ಎಸ್‌ಎಲ್‌ಸಿ ನೋಂದಣಿ ಶುಲ್ಕವೂ ಇದೀಗ ಏರಿಕೆಯಾಗಿದೆ. ಈ ಮೊದಲು ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ನೋಂದಣಿ ಶುಲ್ಕ 248 ರುಪಾಯಿ ಪಾವತಿಸಬೇಕಿತ್ತು. ಆದರೀಗ ಎಸ್‌ಎಸ್‌ಎಲ್‌ಸಿ ನೋಂದಣಿ ಶುಲ್ಕವು 248 ರುಪಾಯಿಗಳಿಂದ 260 ರುಪಾಯಿಗೆ ಏರಿಕೆಯಾಗಿದೆ. ಅಂದರೆ ಖಾಸಗಿ ಅಭ್ಯರ್ಥಿಗಳು ನೋಂದಣಿ ಶುಲ್ಕವನ್ನೂ 12 ರುಪಾಯಿ ಹೆಚ್ಚುವರಿಯಾಗಿ ವಿದ್ಯಾರ್ಥಿಗಳು ಪಾವತಿಸಬೇಕಿದೆ. ಇನ್ನು ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ನೋಂದಣಿ ಶುಲ್ಕ 72 ರುಪಾಯಿಗಳಿಂದ 76 ರುಪಾಯಿಗೆ ಏರಿಕೆಯಾಗಿದೆ.

ಇನ್ನು ಪುನರಾವರ್ತಿತವಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಶುಲ್ಕದಲ್ಲೂ ಏರಿಕೆಯಾಗಿದೆ. ಈ ಮೊದಲು ಒಂದು ವಿಷಯಕ್ಕೆ 448 ರುಪಾಯಿ ಪಾವತಿಸಬೇಕಿತ್ತು. ಆದರೆ ಇದೀಗ ಒಂದು ವಿಷಯಕ್ಕೆ 470 ರುಪಾಯಿ ಶುಲ್ಕ ಪಾವತಿಸಬೇಕಿದೆ. ಇನ್ನು ಎರಡು ವಿಷಯಕ್ಕೆ 559 ರುಪಾಯಿಯಿಂದ 587 ರುಪಾಯಿಗೆ ಏರಿಕೆಯಾಗಿದೆ. ಇದಷ್ಟೇ ಅಲ್ಲದೇ ಮೂರು ಅಥವಾ ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ ಪರೀಕ್ಷೆ ಬರೆಯುವವರು 752 ರುಪಾಯಿಗಳ ಬದಲಿಗೆ 790 ರುಪಾಯಿ ಶುಲ್ಕ ಪಾವತಿಸಬೇಕಿದೆ.

Author

ಪ್ರಮುಖ ಸುದ್ದಿ

Stock market

Astrology