Home » ಲೈವ್ ನ್ಯೂಸ್ » IAS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸದಲಾಗಿದೆ!

IAS ಅಧಿಕಾರಿಗಳ ವರ್ಗಾವಣೆ  ಮಾಡಿ ಆದೇಶ ಹೊರಡಿಸದಲಾಗಿದೆ!

ಬೆಂಗಳೂರು.04.ಅ: ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಹಲವು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ  ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದ ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರನ್ನು ಬೆಂಗಳೂರು ವಿಭಾಗದ ನೂತನ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಇನ್ನು ಡಿಪಿಎಆರ್ (ಇ-ಆಡಳಿತ) ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪಂಕಜ್ ಕುಮಾರ್ ಪಾಂಡೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಇದರೊಂದಿಗೆ ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅವರ ಬಳಿಯೇ ಮುಂದುವರಿಸಲಾಗಿದೆ.

ಇದೇ ವೇಳೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಲ್ಮಾ ಕೆ. ಫಾಹಿಮ್ ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಿ ರಾಜ್ಯಪಾಲರ ಆದೇಶದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅಧಿಸೂಚನೆ ಹೊರಡಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology