Home » ಲೈವ್ ನ್ಯೂಸ್ » ನವದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಭಾಗಿ

ನವದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಭಾಗಿ

ಹೊಸ ದೆಹಲಿ: ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ನವದೆಹಲಿಯಲ್ಲಿ ಮಂಗಳವಾರ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರ ಸಭೆ ನಡೆಯಿತು. ಸಭೆಯಲ್ಲಿ ವಿದ್ಯಾರ್ಥಿಗಳ ಧ್ವನಿ. ಉನ್ನತ ಶಿಕ್ಷಣದ ಗುಣಮಟ್ಟ ಹಾಗೂ ಶೈಕ್ಷಣಿಕ ಪ್ರಗತಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ರಾಜ್ಯದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಶೈಕ್ಷಣಿಕ ಅಭಿವೃದ್ಧಿಗೆ ಹಲವು ನೂತನ ಯೋಜನೆಗಳನ್ನು ಜಾ-ರಿಗೊಳಿಸಲಾಗಿದ್ದು, ಎಐ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪದವಿ ವಿದ್ಯಾರ್ಥಿನಿಯರಿಗೆ ‘ದೀಪಿಕಾ’ ಯೋಜನೆ, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ ಎಂದು ವಿವರಿಸಿದರು. ಹಾಗೂ

ನಾನು ಉನ್ನತ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಹಲವು ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಚರ್ಚಿಸಿ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ಮತ್ತು ಸೌಲಭ್ಯಗಳ ಕು-ರಿತು ಕ್ರಮ ಕೈಗೊಳ್ಳಲಾಗುತ್ತಿದೆ. ಉನ್ನತ ಶಿಕ್ಷಣ ಪಡೆದ

ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿ ನೀಡುವ ಕುರಿತು ವಿಶೇಷ ಗಮನ ಹರಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟ ಹಾಗೂ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಬದ್ಧವಾಗಿದೆ ಎಂದು

ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.

ಸಭೆಯಲ್ಲಿ ಕರ್ನಾಟಕ ಸೇರಿದಂತೆ ಕೇರಳ, ತೆಲಂಗಾಣ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಶೈಕ್ಷಣಿಕ ಪ್ರಗತಿ, ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಉನ್ನತ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳದ ಸಿಎಂ ವಿ.ಡಿ.ಸತೀಶನ್, ಸಂಸದೆ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಶಿಕ್ಷಣ ಸಚಿವರು ಹಲವರು ಉಪಸ್ಥಿತರಿದ್ದರು.

Author

ಪ್ರಮುಖ ಸುದ್ದಿ

Stock market

Astrology