Home » ಲೈವ್ ನ್ಯೂಸ್ » ಉನ್ನತ ಶಿಕ್ಷಣ ಇಲಾಖೆಯಲ್ಲಿ ಸಾವಿರಾರು ಹುದ್ದೆ ಖಾಲಿ, ತಕ್ಷಣವೇ ಭಾರತಿ ಮಾಡಲಾಗುತ್ತಿದೆ!

ಉನ್ನತ ಶಿಕ್ಷಣ ಇಲಾಖೆಯಲ್ಲಿ ಸಾವಿರಾರು ಹುದ್ದೆ ಖಾಲಿ, ತಕ್ಷಣವೇ ಭಾರತಿ ಮಾಡಲಾಗುತ್ತಿದೆ!

ಬೆಂಗಳೂರು.09.ಅ: ರಾಜ್ಯದಲ್ಲಿ ಬಹಳಷ್ಟು ವಿಶ್ವವಿದ್ಯಾಲಯಗಳಲ್ಲಿ ಪ್ರಗತಿ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ವಿವಿಗಳಲ್ಲಿ ಖಾಲಿ ಇರುವ ಸಾವಿರಾರು ಪ್ರೊಫೆಸರ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಉನ್ನತ ಶಿಕ್ಷಣ ಇಲಾಖೆಯ ಸುಧಾರಣೆಗೆ ಕೈಗೊಂಡಿರುವ ಪ್ರಮುಖ ಕ್ರಮಗಳನ್ನು ಹಂಚಿಕೊಂಡಿದ್ದಾರೆ.

45 ದಿನಗಳಲ್ಲಿ ಮಹತ್ವದ ಸುಧಾರಣಾ ಕ್ರಮಗಳು
ತಾವು ಉನ್ನತ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳಲ್ಲಿ, ಸುಮಾರು 10 ದಿನಗಳ ಕಾಲ ಇಲಾಖೆಯ ಪ್ರಗತಿ ಪರಿಶೀಲನೆಗೆ ಮೀಸಲಿಟ್ಟಿರುವುದಾಗಿ ಸಚಿವರು ತಿಳಿಸಿದರು. ಈಗಾಗಲೇ ಎರಡು ಬಾರಿ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ (VCs) ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದರು.

ವಿವಿಗಳಲ್ಲಿ ಹಣಕಾಸಿನ ಅಭಾವವಿಲ್ಲ: ಸಚಿವರ ಸ್ಪಷ್ಟನೆ
ರಾಜ್ಯದ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿವೆ ಎಂಬ ವರದಿಗಳನ್ನು ಸಚಿವರು ಸ್ಪಷ್ಟವಾಗಿ ತಳ್ಳಿಹಾಕಿದರು. ರಾಜ್ಯದ ಹೊಸ ವಿವಿಗಳಲ್ಲಿ ಹೆಚ್ಚುವರಿ ನಿಧಿ ಲಭ್ಯವಿದೆ ಎಂದು ಅಂಕಿಅಂಶ ಸಹಿತ ವಿವರಿಸಿದರು:

ಚಾಮರಾಜನಗರ ವಿಶ್ವವಿದ್ಯಾಲಯ: 4 ಕೋಟಿ ರೂಪಾಯಿ ಹೆಚ್ಚುವರಿ ನಿಧಿ.

ಕೊಡಗು ವಿಶ್ವವಿದ್ಯಾಲಯ: 4 ಕೋಟಿ ರೂಪಾಯಿ ಹೆಚ್ಚುವರಿ ನಿಧಿ.

ಹಾಸನ ವಿಶ್ವವಿದ್ಯಾಲಯ: 30 ಕೋಟಿ ರೂಪಾಯಿ ಹೆಚ್ಚುವರಿ ಹಣ ಲಭ್ಯವಿದೆ.

ಮೈಸೂರು ವಿವಿ ಪಿಂಚಣಿ ಸಮಸ್ಯೆಗೆ ಪರಿಹಾರದ ಭರವಸೆ

ಮೈಸೂರು ವಿಶ್ವವಿದ್ಯಾಲಯದಲ್ಲಿ ಎದುರಾಗಿರುವ 71 ಕೋಟಿ ರೂಪಾಯಿ ಪಿಂಚಣಿ ಕೊರತೆ ಸಮಸ್ಯೆಯನ್ನು ರಾಜ್ಯ ಸರ್ಕಾರದ ಮಟ್ಟದಲ್ಲಿ ಶೀಘ್ರದಲ್ಲೇ ಚರ್ಚಿಸಿ ಶಮನಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಅಲ್ಲದೆ, ಇತ್ತೀಚಿನ ವರ್ಷಗಳಲ್ಲಿ ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಸೃಷ್ಟಿಯಾಗಿರುವ ಆರ್ಥಿಕ ಅಸಮತೋಲನವನ್ನು ಹಂತ-ಹಂತವಾಗಿ ಸರಿಪಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಸಾವಿರಾರು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ತಯಾರಿ
ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಸಿಬ್ಬಂದಿಯ ಅಭಾವ ನೀಗಿಸಲು ಶೀಘ್ರದಲ್ಲೇ ಪ್ರೊಫೆಸರ್ ಸೇರಿದಂತೆ ಖಾಲಿ ಇರುವ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡಲು ಗಂಭೀರ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿರುವ ಸಚಿವರ ಈ ಹೇಳಿಕೆ, ಉದ್ಯೋಗಾಕಾಂಕ್ಷಿಗಳು ಹಾಗೂ ಶೈಕ್ಷಣಿಕ ವಲಯದಲ್ಲಿ ಹೊಸ ಭರವಸೆ ಮೂಡಿಸಿದೆ.

Author

ಪ್ರಮುಖ ಸುದ್ದಿ

Stock market

Astrology