Home » ಲೈವ್ ನ್ಯೂಸ್ » ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೇಕಡಾ 15 ರಷ್ಟು ಸಮತಲ ಮೀಸಲಾತಿ!

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೇಕಡಾ 15 ರಷ್ಟು ಸಮತಲ ಮೀಸಲಾತಿ!

ಬೆಂಗಳೂರು.10.ಅ : ರಾಜ್ಯ ಸರ್ಕಾರ ವೃತ್ತಿಪರ ಶಿಕ್ಷಣ ( ಕೋರ್ಸ್ಗ) ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೇಕಡಾ 15 ರಷ್ಟು ಸಮತಲ ಮೀಸಲಾತಿ ಸರ್ಕಾರ ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು (ತಾಂತ್ರಿಕ ಶಿಕ್ಷಣ) ‘ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳಿಗೆ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026’ ಅನ್ನು ಅಧಿಕೃತ ರಾಜ್ಯಪತ್ರದಲ್ಲಿ ವಿಶೇಷ ಪ್ರಕಟಣೆಯಾಗಿ ಹೊರಡಿಸಿದೆ.

ಗ್ರಾಮೀಣ ಕೋಟಾದ ಶೇ. 15 ಸೀಟುಗಳ ಹಂಚಿಕೆ ವಿವರ:

ಸರ್ಕಾರಿ ಸೀಟುಗಳ ಪೈಕಿ ನಿಗದಿಪಡಿಸಲಾಗಿರುವ ಶೇಕಡಾ 15 ರಷ್ಟು ಗ್ರಾಮೀಣ ಮೀಸಲಾತಿಯನ್ನು ಈ ಕೆಳಗಿನಂತೆ ಎರಡು ಪ್ರಮುಖ ವಿಭಾಗಗಳಾಗಿ (ತಲಾ ಶೇ. 7.5) ವಿಂಗಡಿಸಿ ಸಮತಲ ಮೀಸಲಾತಿ ಕಲ್ಪಿಸಲಾಗಿದೆ:

ಸರ್ಕಾರಿ ಶಾಲಾ-ಕಾಲೇಜುಗಳ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ. 7.5 ಮೀಸಲಾತಿ: ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿರುವ, ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮುಗಿಸಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡಾ 7.5 ರಷ್ಟು ಸೀಟುಗಳನ್ನು ಸಮತಲವಾಗಿ ಮೀಸಲಿಡಲಾಗುತ್ತದೆ.

ಇತರ ಗ್ರಾಮೀಣ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಶೇ. 7.5 ಮೀಸಲಾತಿ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ನೆಲೆಗೊಂಡಿರುವ ಇತರ ಶಾಲೆಗಳು ಅಥವಾ ಶಿಕ್ಷಣ ಸಂಸ್ಥೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡಿರುವ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಳಿದ ಶೇಕಡಾ 7.5 ರಷ್ಟು ಸೀಟುಗಳನ್ನು ಸಮತಲವಾಗಿ ಹಂಚಿಕೆ ಮಾಡಲಾಗುತ್ತದೆ.

ಆಕ್ಷೇಪಣೆಗಳ ಪರಿಶೀಲನೆ ಬಳಿಕ ಅಂತಿಮ ಆದೇಶ:

ಈ ನಿಯಮಗಳಿಗೆ ಸಂಬಂಧಿಸಿದಂತೆ ಆರಂಭಿಕ ಕರಡು ಅಧಿಸೂಚನೆಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಕಟಿಸಿ, ಸಾರ್ವಜನಿಕರು ಹಾಗೂ ಬಾಧಿತರಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು.

ಸಲ್ಲಿಕೆಯಾದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ರಾಜ್ಯಪಾಲರ ಆದೇಶದ ಮೇರೆಗೆ ಈ ಅಂತಿಮ ತಿದ್ದುಪಡಿ ನಿಯಮಗಳನ್ನು ಹೊರಡಿಸಲಾಗಿದ್ದು, ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದಲೇ ಇವು ಅಧಿಕೃತವಾಗಿ ಜಾರಿಗೆ ಬರಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Author

ಪ್ರಮುಖ ಸುದ್ದಿ

Stock market

Astrology