15/06/2025 9:45 PM

Translate Language

Home » ಲೈವ್ ನ್ಯೂಸ್ » ಕರ್ನಾಟಕ ಸರ್ಕಾರದ 43 ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆ ಖಾಲಿ.

ಕರ್ನಾಟಕ ಸರ್ಕಾರದ 43 ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆ ಖಾಲಿ.

Facebook
X
WhatsApp
Telegram

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಇಲಾಖೆಗಳ ಸೇರಿದಂತೆ ರಾಜ್ಯದ 43 ಇಲಾಖೆಗಳಲ್ಲಿ ಒಟ್ಟು 2,76,386  ಲಕ್ಷ ಹುದ್ದೆಗಳು ಖಾಲಿ ಉಳಿದಿರುವ ಸರ್ಕಾರ ಅಧಿಕೃತ ಮಾಹಿತಿ ಲಭ್ಯವಾಗಿದೆ.

ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ.ಇವುಗಳಲ್ಲಿ

16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ.

16,734 ಬಿ ದರ್ಜೆಯ ಹುದ್ದೆಗಳು,

1,66,021 ಸಿ ದರ್ಜೆಯ ಹುದ್ದೆಗಳು,

77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಲಾಗಿದೆ.

ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069 ಹುದ್ದೆಗಳು ಖಾಲಿ ಇದ್ದು,

ಒಳಾಡಳಿತ ಇಲಾಖೆಯಲ್ಲಿ 26,168,

ಕಂದಾಯ ಇಲಾಖೆಯಲ್ಲಿ 11,145,

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,898 ಹುದ್ದೆಗಳು ಖಾಲಿ ಉಳಿದಿದೆ.

ಗ್ರೂಪ್-ಸಿ ವೃಂದದ 96,844 ಹುದ್ದೆಗಳನ್ನು

ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ವಾಹನ ಚಾಲಕರು ಮತ್ತು ಗ್ರೂಪ್-ಡಿ ಸಮನಾಂತರ ಮತ್ತು ತಾಂತ್ರಿಕ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ರಾಜ್ಯದಲ್ಲಿ ವಿವಿಧ ಇಲಾಖೆಗಳ ವಿವಿಧ ವೃಂದಗಳ ಒಟ್ಟಾರೆ 4673 ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಪ್ರಸ್ತಾವ ಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!