15/06/2025 10:20 PM

Translate Language

Home » ಲೈವ್ ನ್ಯೂಸ್ » ಡಿ.28 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಡಿ.28 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Facebook
X
WhatsApp
Telegram

ಡಿ.24 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್.ಎಸ್.ಎಸ್.ಹಾಗೂ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್.28 ರಂದು ಬೀದರ ಕರ್ನಾಟಕ ಕಾಲೇಜು ಆಡಿಟೋರಿಯಂದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ (ಆಯ್ಕೆ ಕಾರ್ಯಕ್ರಮ) ಹಮ್ಮಿಕೊಳ್ಳಲಾಗಿದೆ.


ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗಾರ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಮದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಂ.ಜಿ.ಮುಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬಿದರ ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಭಾಗವಹಿಸಲಿದ್ದಾರೆ.

ಗೌರವಾನ್ವಿತ ಆಮಂತ್ರಿಕರಾಗಿ ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬೀದರ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಷ ಪಾಟೀಲ ಭಾಗವಹಿಸಲಿದ್ದಾರೆ.

Source: www.prajaprabhat.com

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!