ಬೀದರ, 26ಡ24 ಬೀದರ ಜಿಲ್ಲೆಯಲ್ಲಿ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರ ಅಧ್ಯಕ್ಷತೆಯಲ್ಲಿ ಜನವರಿ.2 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
