09/06/2025 2:54 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಪ್ರವೇಶಾತಿ ಉತ್ತಮಪಡಿಸುವಲ್ಲಿ ಯೋಜನೆಗಳ ರೂಪಿಸಲು ಚಿಂತನೆ:ಸಿಎಂ ಸೂಚನೆ.!

ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಪ್ರವೇಶಾತಿ ಉತ್ತಮಪಡಿಸುವಲ್ಲಿ ಯೋಜನೆಗಳ ರೂಪಿಸಲು ಚಿಂತನೆ:ಸಿಎಂ ಸೂಚನೆ.!

Facebook
X
WhatsApp
Telegram

ಬೆಂಗಳೂರು: 09.ಜನವರಿ.25. ಕರ್ನಾಟಕ ರಾಜ್ಯ ಸರ್ಕಾರ ಉನ್ನತ ಶಿಕ್ಷಣದಲ್ಲಿ ಮತ್ತೆ ಪ್ರಗತಿಪರ ಚಿಂತನೆ ನಡೆಸುತ್ತಿದೆ. ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ಕರ್ನಾಟಕ ರಾಷ್ಟ್ರಮಟ್ಟದಲ್ಲಿ 12ನೇ ಸ್ಥಾನದಲ್ಲಿದ್ದು,  ಈ ಸ್ಥಾನ ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಉನ್ನತ ಶಿಕ್ಷಣದಲ್ಲಿ ಒಟ್ಟು 24 ಲಕ್ಷ ವಿದ್ಯಾರ್ಥಿಗಳಿದ್ದು, 5 ಲಕ್ಷ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣಕ್ಕೆ ಒಟ್ಟಾರೆ ಪ್ರವೇಶಾತಿ ರಾಜ್ಯದಲ್ಲಿ ಶೇ.36 ರಷ್ಟಿದೆ. ದೇಶದ ಶೇಕಡಾವಾರು 27.30 ರಷ್ಟಿದೆ.

ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು.

ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಆಯವ್ಯಯದಲ್ಲಿ 5862 ಕೋಟಿ ರೂ. ಒದಗಿಸಲಾಗಿದ್ದು, ಇದುವರೆಗೆ 3713.73 ಕೋಟಿ ರೂ. ವೆಚ್ಚ ಮಾಡಿ ಶೇ.72.87 ಪ್ರಗತಿ ಸಾಧಿಸಲಾಗಿದೆ.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‍ನಲ್ಲಿ 250 ಕೋಟಿ ರೂ. ಒದಗಿಸಲಾಗಿದ್ದು, ಇದನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!