09/06/2025 2:57 PM

Translate Language

Home » ಲೈವ್ ನ್ಯೂಸ್ » ಇಂದು ಬೀದರ ಜಿಲ್ಲೆಯ ಭೂ ಸುರಕ್ಷಾ ಇ-ಖಜಾನೆ, ಡಿಜಿಟಿಲೈಜೇಷನ ಉದ್ಘಾಟನೆ ಸಮಾರಂಭ.!

ಇಂದು ಬೀದರ ಜಿಲ್ಲೆಯ ಭೂ ಸುರಕ್ಷಾ ಇ-ಖಜಾನೆ, ಡಿಜಿಟಿಲೈಜೇಷನ ಉದ್ಘಾಟನೆ ಸಮಾರಂಭ.!

Facebook
X
WhatsApp
Telegram



ಬೀದರ 09.ಜನವರಿ.25:- ಬೀದರ ಜಿಲ್ಲಾಡಳಿತ ಬೀದರ ವತಿಯಿಂದ ಜನವರಿ 10 ರಂದು ಬೆಳಿಗ್ಗೆ 10 ಗಂಟೆಗೆ ತಹಸೀಲ್ ಕಛೇರಿ ಬೀದರದಲ್ಲಿ ಆಯೋಜಿಸಿರುವ ಭೂ ಸುರಕ್ಷಾ ಇ-ಖಜಾನೆ ತಾಲ್ಲೂಕು ಕಛೆರಿ, ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.

ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಹಿಸಲಿದ್ದಾರೆ.

ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಭಾಗವಹಿಸಲಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!